
ದೆಹಲಿ(ಮಾ.26): ಐಪಿಎಲ್ 12ನೇ ಆವೃತ್ತಿಯ ಒಂದೇ ಇನ್ನಿಂಗ್ಸ್‌ನಲ್ಲಿ ವಿಶ್ವದ ಗಮನಸೆಳೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಇದೀಗ CSK ವಿರುದ್ದದ ಪಂದ್ಯಕ್ಕೆ ಸಜ್ಜಾಗಿದ್ದಾರರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಂತ್ 27 ಎಸೆತದಲ್ಲಿ 78 ರನ್ ಚಚ್ಚಿದ್ದರು.
ಇದನ್ನೂ ಓದಿ: 27 ಎಸೆತ, 7 ಸಿಕ್ಸರ್, 7 ಬೌಂಡರಿ, 78 ರನ್- ಇದು ಪಂತ್ ಅಬ್ಬರ!
7 ಬೌಂಡರಿ ಹಾಗೂ 7 ಸಿಕ್ಸರ್ ಸಿಡಿಸಿರುವ ಪಂತ್, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನ ರೂವಾರಿಯಾಗಿದ್ದರು. ಪಂತ್ ಸ್ಫೋಟಕ ಬ್ಯಾಟಿಂಗ್ ಇದೀಗ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್‌ಗೆ ತಲೆನೋವು ಹೆಚ್ಚಿಸಿದೆ. ಪಂತ್ ಐಪಿಎಲ್ ಎದುರಾಳಿ ಅನ್ನೋ ಕಾರಣಕ್ಕೆ ಕಾರ್ತಿಕ್ ತಲೆಕೆಡಿಸಿಕೊಂಡಿಲ್ಲ, ಬದಲಾಗಿ ಪಂತ್ ಅಬ್ಬರಿದಿಂದ 2019ರ ವಿಶ್ವಕಪ್ ಟೂರ್ನಿಯಲ್ಲಿ ಎಂ.ಎಸ್.ಧೋನಿ ಬ್ಯಾಕ್ಅಪ್ ವಿಕೆಟ್ ಕೀಪರ್ ಸ್ಥಾನ ಕೈತಪ್ಪೋ ಸಾಧ್ಯತೆ ಇದೆ.
"
ಇದನ್ನೂ ಓದಿ: 'ಕೊಹ್ಲಿ ಕೋಪ ಕಂಡರೆ ಭಯವಾಗುತ್ತೆ': ಇದು ಸ್ಟಾರ್ ವಿಕೆಟ್ ಕೀಪರ್ ಮಾತು..!
2019ರ ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸುತ್ತಿದೆ. ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿಗೆ ಬ್ಯಾಕ್ಅಪ್ ಆಗಿ ಮತ್ತೊರ್ವ ವಿಕೆಟ್ ಕೀಪರ್ ಆಯ್ಕೆಯಾಗೋ ಸಾಧ್ಯತೆ ಇದೆ. ಇಷ್ಟು ದಿನ ದಿನೇಶ್ ಕಾರ್ತಿಕ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಪಂತ್ ಸ್ಫೋಟಕ ಬ್ಯಾಟಿಂಗ್ ಬಳಿಕ ಕಾರ್ತಿಕ್ ಬದಲು ಪಂತ್ ಹೆಸರು ಕೇಳಿಬರುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.