IPL 2019: ಫೈನಲ್ ಪಂದ್ಯ ಚೆನ್ನೈನಿಂದ ಶಿಫ್ಟ್!

Published : Apr 22, 2019, 08:42 PM IST
IPL 2019: ಫೈನಲ್ ಪಂದ್ಯ ಚೆನ್ನೈನಿಂದ ಶಿಫ್ಟ್!

ಸಾರಾಂಶ

12ನೇ ಆವೃತ್ತಿ ಐಪಿಎಲ್ ಟೂರ್ನಿ ಫೈನಲ್ ಪಂದ್ಯ ಚೆನ್ನೈನಿಂದ ಸ್ಥಳಾತಂರಗೊಂಡಿದೆ. ನೂನತ ವೇಳಾಪಟ್ಟಿ ಪ್ರಕಾರ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸೋ ಕ್ರೀಡಾಂಗಣ ಯಾವುದು? ಇಲ್ಲಿದೆ ವಿವರ.

ಮುಂಬೈ(ಏ.22): ಐಪಿಎಲ್ 12ನೇ ಆವೃತ್ತಿ ಪಂದ್ಯ ದಿನದಿಂದ ದಿನಕ್ಕೆ ರೋಚಕತೆ ಹೆಚ್ಚುತ್ತಿದೆ. ಇದರ ಬೆನ್ನಲ್ಲೇ ಇದೀಗ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ರೀಡಾಂಗಣ ಫಿಕ್ಸ್ ಆಗಿದೆ. ಈ ಮೊದಲು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ಆಯೋಜಿಸಲು ನಿರ್ಧರಿಸಲಾಗಿತ್ತು. ಇದೀಗ ಫೈನಲ್ ಪಂದ್ಯವನ್ನು ಚೆನ್ನೈನಿಂದ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ. ಮೇ 12 ರಂದು ಫೈನಲ್ ಪಂದ್ಯ ನಡೆಯಲಿದೆ. 

ಇದನ್ನೂ ಓದಿ: CSK ವಿರುದ್ಧ ಸೇಡು ತೀರಿಸಿಕೊಂಡ RCB-ಕೊಹ್ಲಿ ಪಡೆಗೆ 1 ರನ್ ಗೆಲುವು!

ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ 12ನೇ ಆವೃತ್ತಿ ಐಪಿಎಲ್ ಟೂರ್ನಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ. ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯ ಚನ್ನೈನಲ್ಲಿ ಆಯೋಜಿಸಲಾಗಿದೆ. ಇನ್ನು 2ನೇ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯ ವಿಶಾಖಪಟ್ಟಣಂದಲ್ಲಿ ನಡೆಯಲಿದೆ.

ಇದನ್ನೂ ಓದಿ: ನಿಧಾನಗತಿ ಬೌಲಿಂಗ್‌: ಅಶ್ವಿನ್‌ಗೆ 12 ಲಕ್ಷ ದಂಡ

ಈ ಬಾರಿಯ ಫೈನಲ್ ಪಂದ್ಯ ಚೆನ್ನೈನಲ್ಲಿ ಆಯೋಜಿಸಲು ಬಿಸಿಸಿಐ ಎಲ್ಲಾ ಸಿದ್ಧತೆ ನಡೆಸಿತ್ತು. ಆದರೆ ಚಿದಂಬರಂ ಕ್ರೀಡಾಂಗಣದಲ್ಲಿ ಮುಚ್ಚಲಾಗಿರುವ 2 ಗ್ಯಾಲರಿ ಆಸನ ವ್ಯವಸ್ಥೆ ಮತ್ತೆ ಆರಂಭಿಸಲು ಚೆನ್ನೈ ಕಾರ್ಪೋರೇಶನ್‌ನಿಂದ ಅನುಮತಿ ಸಿಕ್ಕಿಲ್ಲ. ಹೀಗಾಗಿ ಚೆನ್ನೈನಿಂದ ಐಪಿಎಲ್ ಪಂದ್ಯವನ್ನು ಸ್ಥಳಾಂತರ ಮಾಡಲಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!
ಮದುವೆ ಮುಂದೂಡಿಕೆ ಬಳಿಕ ಸ್ಮೃತಿ ಮಂಧನಾ ಮೊದಲ ಪೋಸ್ಟ್: ನಿಶ್ಚಿತಾರ್ಥ ಉಂಗುರ ನಾಪತ್ತೆ! ಏನಾಯ್ತು ಎಂದ ಫ್ಯಾನ್ಸ್