ಸದ್ದಿಲ್ಲದೇ ಮುಂಬೈ ತರಬೇತಿ ಶಿಬಿರ ಸೇರಿಕೊಂಡ ಟೀಂ ಇಂಡಿಯಾ ಕ್ರಿಕೆಟಿಗ!

Published : Mar 12, 2019, 09:12 PM IST
ಸದ್ದಿಲ್ಲದೇ ಮುಂಬೈ ತರಬೇತಿ ಶಿಬಿರ ಸೇರಿಕೊಂಡ ಟೀಂ ಇಂಡಿಯಾ ಕ್ರಿಕೆಟಿಗ!

ಸಾರಾಂಶ

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಸದ್ದಿಲ್ಲದೆ ಮುಂಬೈ ಇಂಡಿಯನ್ಸ್ ತರಬೇತಿ ಶಿಬಿರಕ್ಕೆ ಹಾಜರಾಗಿದ್ದಾರೆ. ಆಸಿಸ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಸ್ಟಾರ್ ಕ್ರಿಕೆಟಿಗ ಇದೀಗ ಮುಂಬೈ ಪಾಳಯದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

ಮುಂಬೈ(ಮಾ.12): ಇಂಜುರಿಗೆ ತುತ್ತಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಗುಳಿದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್ ತರಬೇತಿ ಶಿಬಿರಕ್ಕೆ ಹಾಜರಾಗಿದ್ದಾರೆ. ಈ ಮೂಲಕ ಮುಂಬೈ 12ನೇ ಆವೃತ್ತಿ ಐಪಿಎಲ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸುತ್ತಿದೆ.

ಇದನ್ನೂ ಓದಿ: ಧೋನಿಗೆ ಚಾಲೆಂಜ್ - ಯುವಿ ಹೆಲಿಕಾಪ್ಟರ್ ಸಿಕ್ಸರ್ ವೈರಲ್!

ಹಾರ್ದಿಕ್ ಸದ್ಯ ಇಂಜುರಿಯಿಂದ ಚೇತರಿಸಿಕೊಂಡಿದ್ದಾರೆ. ಟೀಂ ಇಂಡಿಯಾದಿಂದ ಹೊರಬಿದ್ದ ಬಳಿಕ ವಿಶ್ರಾಂತಿಗೆ ಜಾರಿದ್ದ ಹಾರ್ದಿಕ್ ಬಳಿಕ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ನೆಸ್ ಸಾಬೀತು ಪಡಿಸಿದ್ದಾರೆ. ಇದೀಗ ಮುಂಬೈ ಇಂಡಿಯನ್ಸ್ ತರಬೇತಿ ಶಿಬಿರದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್ 2019: ಮುಂಬೈ ಇಂಡಿಯನ್ಸ್ ತಂಡದ 4 ಅನ್‌ಲಕ್ಕಿ ಆಟಗಾರರು!

ಮುಂಬೈ ಇಂಡಿಯನ್ಸ್ ಶಿಬಿರದಲ್ಲಿ ಹಾರ್ದಿಕ್ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ, ಜಯಂತ್ ಯಾದವ್, ರಾಹುಲ್ ಚಹಾಲ್, ಬರೀಂದರ್ ಸ್ರಾನ್, ರಸಿಕ್ ಸಲಾಮ್, ಮಿಚೆಲ್ ಮೆಕ್ಲೆನಾಘನ್ ಹಾಗೂ ಇಶಾನ್ ಕಿಶನ್ ಅಭ್ಯಾಸ ಆರಂಭಿಸಿದ್ದಾರೆ.  ಮಾರ್ಚ್ 23 ರಿಂದ 12ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಳ್ಳುತ್ತಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?