
ಮೊಹಾಲಿ(ಏ.02): ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಲೀಗ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಅದ್ಬುತ ಬೌಲಿಂಗ್ ದಾಳಿ ಮೂಲಕ ಗೆಲುವು ಸಾಧಿಸಿದೆ. ಅಂತಿಮ ಹಂತದಲ್ಲಿ ಸ್ಯಾಮ್ ಕುರ್ರನ್, ಡೆಲ್ಲಿ ತಂಡದ ಮೂವರು ಬ್ಯಾಟ್ಸ್‌ಮನ್ ಔಟ್ ಮಾಡೋ ಮೂಲಕ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. 12ನೇ ಆವೃತ್ತಿಯಲ್ಲಿ ಮೊದಲ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಕುರ್ರನ್ ಗೆಲುವಿನ ಬಳಿಕ ಫ್ರಾಂಚೈಸಿ ಒಡತಿ ಪ್ರೀತಿ ಝಿಂಟಾ ಜೊತೆ ಬಾಂಗ್ರಾ ಡ್ಯಾನ್ಸ್ ಮಾಡಿದ್ದಾರೆ.
ಇದನ್ನೂ ಓದಿ: IPL ಆಡುತ್ತಿರುವ ಪಾಂಡ್ಯ, ರಾಹುಲ್’ಗೆ ಸಂಕಷ್ಟ..!
ಕುರ್ರನ್ ಅದ್ಬುತ ದಾಳಿಯಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಶರಣಾಯಿತು. ಈ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ಗೆಲುವಿನ ಕೇಕೆ ಹಾಕಿತು. ಸೂಪರ್ ಬೌಲಿಂಗ್ ಮೂಲಕ ಡೆಲ್ಲಿ ತಂಡಕ್ಕೆ ಸೋಲುಣಿಸಿದ ಸ್ಯಾಮ ಕುರ್ರನ್ ಇತಿಹಾಸ ರಚಿಸಿದರು. ಗೆಲುವು ಸಾಧಿಸಿದ ಬೆನ್ನಲ್ಲೇ ಮೈದಾನಕ್ಕಿಳಿದ ಒಡತಿ ಪ್ರಿತಿ, ಆಟಗಾರರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಕುರ್ರನ್ ಬಾಂಗ್ರಾ ಡ್ಯಾನ್ಸ್ ಮಾಡಿ ಗಮನಸಳೆದರು.
ಇದನ್ನೂ ಓದಿ: RCBಗೆ ಮತ್ತಷ್ಟು ಬಲ- ತಂಡ ಸೇರಿಕೊಳ್ಳಲಿದ್ದಾರೆ ಆಸಿಸ್ ಆಲ್ರೌಂಡರ್ !
ಕಿಂಗ್ಸ್ ಇಲೆವೆನ್ ಪಂಜಾಬ್ 9 ವಿಕೆಟ್ ನಷ್ಟಕ್ಕೆ 166 ರನ್ ಸಿಡಿಸಿತು. ಇದಕ್ಕುತ್ತರವಾಗಿ ಡೆಲ್ಲಿ 19.2 ಓವರ್‌ಗಳಲ್ಲಿ 152 ರನ್‌ಗೆ ಆಲೌಟ್ ಆಗಿದೆ. ಈ ಮೂಲಕ ಪಂಜಾಬ್ 14 ರನ್ ಗೆಲುವು ಸಾಧಿಸಿತು. ಸ್ಯಾಮ್ ಕುರ್ರನ್ ಒಟ್ಟು 4 ವಿಕೆಟ್ ಕಬಳಿಸಿ ಮಿಂಚಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.