
ಮುಂಬೈ(ಮಾ.26): ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಎಡಭುಜಕ್ಕೆ ಗಾಯ ಮಾಡಿಕೊಂಡು ಮೈದಾನ ತೊರೆದಿದ್ದ ಮುಂಬೈ ಇಂಡಿಯನ್ಸ್ ವೇಗಿ ಜಸ್‌ಪ್ರೀತ್ ಬೂಮ್ರಾ, ಆತಂಕ ಸೃಷ್ಟಿಸಿದ್ದರು. ಏಕದಿನ ವಿಶ್ವಕಪ್‌ನಲ್ಲಿ ಬೂಮ್ರಾ ನಿರ್ಣಾಯಕ ಪಾತ್ರ ವಹಿಸಲಿದ್ದು, ಅವರ ಮೇಲೆ ತಂಡ ಹೆಚ್ಚು ಅವಲಂಬಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾನುವಾರದ ಘಟನೆ ಎಲ್ಲರಲ್ಲೂ ಆತಂಕ ಮೂಡಿಸಿತ್ತು. ಆದರೆ ಸೋಮವಾರ ಬಿಸಿಸಿಐ ಅಧಿಕಾರಿಯೊಬ್ಬರು ಬೂಮ್ರಾ ಗಾಯದ ಪ್ರಮಾಣ ದೊಡ್ಡ ಮಟ್ಟದಲ್ಲ. ಅವರು ಗುಣಮುಖರಾಗುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: IPL 2019: ಮುಂಬೈ VS ಡೆಲ್ಲಿ ಪಂದ್ಯಕ್ಕೆ ವಿಶೇಷ ಅತಿಥಿ!
ಭಾನುವಾರ ರಾತ್ರಿಯೇ ಮುಂಬೈ ಇಂಡಿಯನ್ಸ್ ತಂಡದ ಫಿಸಿಯೋ ನಿತಿನ್ ಪಟೇಲ್‌ಗೆ ಭಾರತ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಕರೆ ಮಾಡಿ ಪರಿಸ್ಥಿತಿ ವಿಚಾರಿಸಿದರು ಎನ್ನಲಾಗಿದೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸಹ ಆತಂತಗೊಂಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಐಪಿಎಲ್: RCB ಬೆಂಗಳೂರು ಪಂದ್ಯಕ್ಕೆ ಮೆಟ್ರೋದಿಂದ ಶುಭಸುದ್ದಿ..!
ಸೋಮವಾರ ಬೆಳಗ್ಗೆ ಬೂಮ್ರಾರನ್ನು ಕೆಲ ಸ್ಕಾ್ಯನ್‌ಗಳಿಗೆ ಒಳಪಡಿಸಲಾಯಿತು. ವರದಿಗಳು ಹೊರಬಂದಿದ್ದು ಯಾವುದೇ ಆತಂಕವಿಲ್ಲ. ಮುಂದಿನ ಪಂದ್ಯದಲ್ಲಿ ಅವರು ಆಡಲಿದ್ದಾರೆ ಎಂದು ಮುಂಬೈ ತಂಡದ ಅಧಿಕಾರಿ ತಿಳಿಸಿದ್ದಾರೆ. ಮಾ.28ರಂದು ಆರ್‌ಸಿಬಿ ವಿರುದ್ಧ ಪಂದ್ಯವನ್ನಾಡಲು ಮುಂಬೈ ತಂಡ ಸೋಮವಾರ ಬೆಂಗಳೂರಿಗೆ ಆಗಮಿಸಿತು. ಆದರೆ ಬೂಮ್ರಾ ಮುಂಬೈನಲ್ಲೇ ಉಳಿದರು. ಅವರು ಮಂಗಳವಾರ ತಂಡ ಕೂಡಿಕೊಳ್ಳುವ ನಿರೀಕ್ಷೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.