CSK ವಿರುದ್ದದ ಪಂದ್ಯಕ್ಕೂ ಮುನ್ನ SRHಗೆ ಶಾಕ್- ಭಗ್ನವಾಗುತ್ತಾ ಹ್ಯಾಟ್ರಿಕ್ ಗೆಲುವು!

Published : Apr 23, 2019, 05:11 PM IST
CSK ವಿರುದ್ದದ ಪಂದ್ಯಕ್ಕೂ ಮುನ್ನ SRHಗೆ ಶಾಕ್- ಭಗ್ನವಾಗುತ್ತಾ ಹ್ಯಾಟ್ರಿಕ್ ಗೆಲುವು!

ಸಾರಾಂಶ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಹೋರಾಟಕ್ಕೆ ತಂಡ ಅಂತಿಮ ಕಸರತ್ತು ನಡೆಸುತ್ತಿದೆ. ಆದರೆ ಪಂದ್ಯ ಆರಂಭಕ್ಕೂ ಕೆಲವೇ ಗಂಟೆಗಳ ಮೊದಲು ಹೈದರಾಬಾದ್ ತಂಡಕ್ಕೆ ಸಂಕಷ್ಟ ಎದುರಾಗಿದೆ. 

ಚೆನ್ನೈ(ಏ.23): ಐಪಿಎಲ್ ಟೂರ್ನಿಯಲ್ಲಿ ಇದೀಗ ಸನ್ ರೈಸರ್ಸ್ ಹೈದರಾಬಾದ್ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ. ಚಿದಂಬರಂ ಕ್ರೀಡಾಗಂಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಅಭ್ಯಾಸ ನಡೆಸಿದೆ. ಆದರೆ ಪಂದ್ಯ ಆರಂಭಕ್ಕೂ ಮುನ್ನವೇ SRH ತಂಡಕ್ಕೆ ಸಂಕಷ್ಠ ಎದುರಾಗಿದೆ.

ಇದನ್ನೂ ಓದಿ: ಮೊದಲ ಸ್ಥಾನದಲ್ಲಿ ಡೆಲ್ಲಿ- ಇತಿಹಾಸದಲ್ಲೇ ಇದೇ ಮೊದಲು ಎಂದ ಫ್ಯಾನ್ಸ್!

ಚೆನ್ನೈ ವಿರುದ್ಧದ ಪಂದ್ಯಕ್ಕೆ SRH ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾಗಿದ್ದಾರೆ. ಮಹತ್ವದ ಪಂದ್ಯಕ್ಕೆ ನಾಯಕ ಅಲಭ್ಯತೆ ಇದೀಗ ತಂಡದ ಆತಂಕ ಹೆಚ್ಚಿಸಿದೆ. ವಿಲಿಯಮ್ಸನ್ ಅಜ್ಜಿ ನಿಧನರಾದ ಕಾರಣ, ತವರಿಗೆ ವಾಪಾಸ್ಸಾಗಿದ್ದಾರೆ. ಹೀಗಾಗಿ ಚೆನ್ನೈ ವಿರುದ್ಧದ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ: ಕೊಹ್ಲಿ - ಡೇಲ್ ಸ್ಟೇನ್ ಅಪ್ಪುಗೆ- ಟ್ವಿಟರ್‌ನಲ್ಲಿ ಮೆಚ್ಚುಗೆ!

ಚೆನ್ನೈ ಮಾತ್ರವಲ್ಲ, ಎಪ್ರಿಲ್ 27 ರಂದು ನಡೆಯುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ವಿಲಿಯಮ್ಸನ್ ಅಲಭ್ಯರಾಗಿದ್ದಾರೆ. ವಿಲಿಯಮ್ಸನ್ ಅಲಭ್ಯತೆಯಿಂದ ವೇಗಿ ಭುವನೇಶ್ವರ್ ಕುಮಾರ್ ತಂಡದ ನಾಯಕತ್ವ ವಹಿಸಿಕೊಳ್ಳೋ ಸಾಧ್ಯತೆ ಇದೆ. ಈಗಾಗಲೇ ಗಾಯದ ಕಾರಣದಿಂದ ವಿಲಿಯಮ್ಸನ್ ಹಲವು ಪಂದ್ಯ ಮಿಸ್ ಮಾಡಿಕೊಂಡಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!