
ಚೆನ್ನೈ(ಮೇ.06): ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ಮೂಲಕ ಪ್ಲೇ ಆಫ್ ತಲುಪಿರುಲವ ಚೆನ್ನೈ ಸೂಪರ್ ಕಿಂಗ್ಸ್, ಇದೀಗ ಮುಂಬೈ ವಿರುದ್ದದ ಹೋರಾಟಕ್ಕೆ ಸಜ್ಜಾಗುತ್ತಿದೆ. ಅಂತಿಮ ಲೀಗ್ ಪಂದ್ಯದಲ್ಲಿ ಸೋಲಿನ ಶಾಕ್ ಅನುಭವಿಸಿದ್ದ ಚೆನ್ನೈ ತಂಡಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ: RCB ಅಭಿಮಾನಿಗಳಿಗೆ ಕನ್ನಡದಲ್ಲಿ ವಿರಾಟ್ ಕೊಹ್ಲಿ ಟ್ವೀಟ್!
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಇಂಜುರಿಯಾಗಿರುವ ಚೆನ್ನೈ ಕ್ರಿಕೆಟಿಗ ಕೇದಾರ್ ಜಾಧವ್ ಇದೀಗ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಭುಜದ ನೋವಿಗೆ ಗುರಿಯಾದ ಕೇದಾರ್, ತಕ್ಷಣವೇ ಮೈದಾನದಿಂದ ಹೊರ ನಡೆದಿದ್ದರು. ಕೇದಾರ್ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಇದನ್ನೂ ಓದಿ: ಚೆನ್ನೈ ವಿರುದ್ಧ ಗೆದ್ದರೂ ಪಂಜಾಬ್ ಟೂರ್ನಿಯಿಂದ ಔಟ್!
ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅಲಭ್ಯರಾಗಿರೋದು ಇದೀಗ ಚೆನ್ನೈ ಚಿಂತೆ ಹೆಚ್ಚಿಸಿದೆ. ಕೇದಾರ್ ಬದಲು ದ್ರುವ್ ಶೊರೆ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಕೇದಾರ್ ಜಾಧವ್ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಚೆನ್ನೈ ಸೂಪರ್ ಕಿಂಗ್ಸ್ ಹಾರೈಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.