
ಹೈದರಾಬಾದ್(ಏ.21): ಸನ್ ರೈಸರ್ಸ್ ಹೈದರಾಬಾದ್ ವಿರುದ್ದದ ಲೀಗ್ ಪಂದ್ಯದಲ್ಲಿ ಕ್ರಿಸ್ ಲಿನ್ ಹಾಗೂ ಸುನಿಲ್ ನರೈನ್ ಉತ್ತಮ ಆರಂಭದ ನಡುವೆಯೂ ಬೃಹತ್ ಮೊತ್ತ ಪೇರಿಸಲು ಕೋಲ್ಕತಾ ನೈಟ್ ರೈಡರ್ಸ್ ವಿಫಲವಾಗಿದೆ. KKR 8 ವಿಕೆಟ್ ನಷ್ಟಕ್ಕೆ 159 ರನ್ ಸಿಡಿಸಿದೆ. ಇದೀಗ SRH ಗೆಲುವಿಗೆ 160 ರನ್ ಸಿಡಿಸಬೇಕಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ KKR ಆರಂಭ ಉತ್ತಮವಾಗಿತ್ತು. ಕ್ರಿಸ್ ಲಿನ್ ಹಾಗೂ ನರೈನ್ 42 ರನ್ ಜೊತೆಯಾಟ ನೀಡಿದರು. ನರೈನ್ ಕೇವಲ 8 ಎಸೆತಗದಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 25 ರನ್ ಸಿಡಿಸಿ ಔಟಾದರು. ಕ್ರಿಲ್ ಲಿನ್ ನಿಧಾನಗತಿಯಲ್ಲಿ ಬ್ಯಾಟ್ ಬೀಸೋ ಮೂಲಕ ತಂಡಕ್ಕೆ ಆಸರೆಯಾದರು.
ಶುಭ್‌ಮಾನ್ ಗಿಲ್, ನಿತೀಶ್ ರಾಣ ಹಾಗೂ ನಾಯಕ ದಿನೇಶ್ ಕಾರ್ತಿಕ್ ಅಬ್ಬರಿಸಲಿಲ್ಲ. ರಿಂಕು ಸಿಂಗ್ 30 ರನ್ ಸಿಡಿಸಿ ಔಟಾದರು. ಕ್ರಿಲ್ ಲಿನ್ 51 ರನ್ ಸಿಡಿಸಿ ನಿರ್ಗಮಿಸಿದರು. ಆ್ಯಂಡ್ರೆ ರಸೆಲ್ ಅಬ್ಬರ ಕೇವಲ 15 ರನ್‌ಗೆ ಅಂತ್ಯವಾಯಿತು. ಹೀಗಾಗಿ ಕೆಕೆಆರ್ 8 ವಿಕೆಟ್ ನಷ್ಟಕ್ಕೆ 159 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.