
ಕೋಲ್ಕತಾ(ಏ.19): ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋರಾಟಕ್ಕೆ ಈಡನ್ ಗಾರ್ಡ್ಸನ್ ಮೈದಾನ ಸಜ್ಜಾಗಿದೆ. ಉಭಯ ತಂಡಗಳಿಗೆ ಇದು ಮಹತ್ವದ ಪಂದ್ಯ. 7 ಸೋಲು ಕಂಡಿರುವ RCB ಇನ್ನುಳಿದ ಎಲ್ಲಾ ಪಂದ್ಯ ಗೆದ್ದು ಪ್ಲೇ ಆಫ್ ಕನಸು ಕಾಣುತ್ತಿದೆ. ಇತ್ತ KKR, ಪ್ಲೇ ಆಫ್ ಕನಸು ಜೀವಂತವಾಗಿರಿಸಲು ಈ ಪಂದ್ಯ ಗೆಲ್ಲಲೇಬೇಕು. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಕಠಿಣ ಹೋರಾಟ ನಡೆಸಲಿದೆ.
RCB ಆಡಿದ 8 ಪಂದ್ಯದಲ್ಲಿ 1ರಲ್ಲಿ ಮಾತ್ರ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕೋಲ್ಕತಾ ನೈಟ್ ರೈಡರ್ಸ್ 8ರಲ್ಲಿ 4 ಪಂದ್ಯ ಗೆದ್ದು ನಾಲ್ಕರಲ್ಲಿ ಸೋಲು ಕಂಡಿದೆ. ಹೀಗಾಗಿ 6ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯಕ್ಕೆ ಆ್ಯಂಡ್ರೆ ರಸೆಲ್ ಅಲಭ್ಯರಾಗುವ ಸಾಧ್ಯತೆ ಇದೆ. ಇಂದಿರಿಯಿಂತ ಚೇತರಿಸಿಕೊಳ್ಳದ ಕಾರಣ ರಸೆಲ್ ಹೊರಗುಳಿಯುವ ಸಾಧ್ಯತೆ ಇದೆ. ಇಂದಿನ ಪಂದ್ಯಕ್ಕೆ ಬಲಿಷ್ಠ ತಂಡವನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಇಲ್ಲಿದೆ RCB ಹಾಗೂ KKR ಸಂಭವನೀಯ ತಂಡದ ವಿವರ.
RCB ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ಪಾರ್ಥೀವ್ ಪಟೇಲ್, ಎಬಿ ಡಿವಿಲಿಯರ್ಸ್, ಮಾರ್ಕಸ್ ಸ್ಟಯ್ನಿಸ್, ಮೊಯಿನ್ ಆಲಿ,ಅಕ್ಷದೀಪ್ ನಾಥ್, ಪವನ್ ನೇಗಿ, ಉಮೇಶ್ ಯಾಧವ್, ಯಜುವೇಂದ್ರ ಚಹಾಲ್, ನವದೀಪ್ ಸೈನಿ, ಕುಲ್ವಂತ್ ಕೆಜ್ರೊಲಿಯಾ
KKR ಸಂಭವನೀಯ ತಂಡ:
ಸುನಿಲ್ ನರೈನ್, ಕ್ರಿಸ್ ಲಿನ್, ರಾಬಿನ್ ಉತ್ತಪ್ಪ, ನಿತೀಶ್ ಕಾಣ, ದಿನೇಶ್ ಕಾರ್ತಿಕ್, ಕಾರ್ಲೋಸ್ ಬ್ರಾಥ್ವೈಟ್, ಶುಭ್‌ಮಾನ್ ಗಿಲ್, ಪಿಯೂಷ್ ಚಾವ್ಲಾ, ಪ್ರಸಿದ್ಧ ಕೃಷ್ಣ, ಕುಲ್ದೀಪ್ ಯಾದವ್,ಹ್ಯಾರಿ ಗರ್ನಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.