
ಮೊಹಾಲಿ(ಏ.13): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ 7ನೇ ಅದೃಷ್ಠ ಪರೀಕ್ಷೆಗೆ ಮುಂದಾಗಿದೆ. 6 ಪಂದ್ಯಗಳಲ್ಲಿ RCB ಸೋಲಿಗೆ ಶರಣಾಗಿದೆ. ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಗೆಲುವಿಗಾಗಿ ಹೋರಾಟ ನಡೆಸಲಿದೆ. ಪಂದಾಬ್ ವಿರುದ್ಧದ ಪಂದ್ಯ RCBಗೆ ಲಕ್ ತಂದುಕೊಡುತ್ತಾ ಅನ್ನೋದು ಅಭಿಮಾನಿಗಳ ಪ್ರಶ್ನೆ.
ಇದನ್ನೂ ಓದಿ: ಶಿವಮೊಗ್ಗದಲ್ಲೇ ನೋಡಿ ಐಪಿಎಲ್ ಮ್ಯಾಚ್- ಅಭಿಮಾನಿಗಳಿಗೆ ಬಿಸಿಸಿಐ ಗಿಫ್ಟ್!
RCB ತಂಡ ಈಗಾಗಲೇ ಸೌತ್ಆಫ್ರಿಕಾ ವೇಗಿ ಡೇಲ್ ಸ್ಟೇನ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಆದರೆ ಸ್ಟೇನ್ ಇಂದಿನ(ಏ.13) ಪಂದ್ಯಕ್ಕೆ ಕಣಕ್ಕಿಳಿಯುವುದು ಅನುಮಾನವಾಗಿದೆ. ಇತ್ತ ಮೊಹಮ್ಮದ್ ಸಿರಾಜ್ ಇಂಜುರಿಯಿಂದ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಉಮೇಶ್ ಯಾದವ್ ಅವಕಾಶ ಪಡೆಯೋ ಸಾಧ್ಯತೆ ಇದೆ.
ಇದನ್ನೂ ಓದಿ: ಇವತ್ತಾದ್ರೂ ಗೆಲ್ಲುತ್ತಾ RCB..?
RCB ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ಪಾರ್ಥೀವ್ ಪಟೇಲ್, ಎಬಿ ಡಿವಿಲಿಯರ್ಸ್, ಮಾರ್ಕಸ್ ಸ್ಟೊಯ್ನಿಸ್, ಮೊಯಿನ್ ಆಲಿ, ಆಕ್ಷದೀಪ್ ನಾಥ್, ಪವನ್ ನೇಗಿ, ಟಿಮ್ ಸೌಥಿ, ನವದೀಪ್ ಸೈನಿ, ಯಜುವೇಂಜ್ರ ಚಹಾಲ್, ಉಮೇಶ್ ಯಾದವ್
KXIP ಸಂಭವನೀಯ ತಂಡ:
ಕೆ.ಎಲ್ ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್, ಡೇವಿಡ್ ಮಿಲ್ಲರ್, ಮನ್ದೀಪ್ ಸಿಂಗ್, ಸ್ಯಾಮ್ ಕುರ್ರನ್, ಹಾರ್ಡಸ್ ವಿಲ್ಜೊನ್, ಆರ್ ಅಶ್ವಿನ್, ಮರುಗನ್ ಅಶ್ವಿನ್, ಮೊಹಮ್ಮದ್ ಶಮಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.