KKR ಟೂರ್ನಿಯಿಂದ ಔಟ್- ಪ್ಲೇ ಆಫ್‌ಗೆ ಎಂಟ್ರಿಕೊಟ್ಟ SRH!

Published : May 05, 2019, 11:20 PM IST
KKR ಟೂರ್ನಿಯಿಂದ ಔಟ್- ಪ್ಲೇ ಆಫ್‌ಗೆ ಎಂಟ್ರಿಕೊಟ್ಟ SRH!

ಸಾರಾಂಶ

ಇಬ್ಬರ ನಡುವಿನ ಹೋರಾಟ ಮೂರನೇ ತಂಡಕ್ಕೆ ಲಾಭವಾಗಿದೆ. ಹೌದು, ಮುಂಬೈ ಹಾಗೂ ಕೆಕೆಆರ್ ನಡುವಿನ ಅಂತಿಮ ಲೀಗ್ ಪಂದ್ಯ ನಿಜಕ್ಕೂ ಲಾಭವಾಗಿದ್ದು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ. ವಾಂಖೆಡೆಯಲ್ಲಿ ನಡೆದ ಈ ರೋಚಕ ಪಂದ್ಯ ಹೈದರಾಬಾದ್ ತಂಡಕ್ಕೆ ಅದೃಷ್ಠ ತಂದುಕೊಟ್ಟಿದ್ದು ಹೇಗೆ?

ಮುಂಬೈ(ಮೇ.05): 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಸೋಲು ಅನುಭವಿಸಿದೆ  ಈ ಮೂಲಕ ಮುಂಬೈ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಇತ್ತ ಕೆಕೆಆರ್ ಟೂರ್ನಿಯಿಂದ ಹೊರಬಿತ್ತು. ವಿಶೇಷ ಅಂದರೆ ಕೆಕೆಆರ್ ಸೋಲಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ಪ್ಲೇ ಆಫ್‌ಗೆ ಎಂಟ್ರಿಕೊಟ್ಟಿದೆ.

ಗೆಲುವಿಗೆ 134 ರನ್ ಟಾರ್ಗೆಟ್ ಪಡೆದ ಮುಂಬೈ ಇಂಡಿಯನ್ಸ್ ಯಾವುದೇ ಒತ್ತಡವಿಲ್ಲದೆ ಕಣಕ್ಕಿಳಿಯಿತು. ಕ್ವಿಂಟನ್ ಡಿಕಾಕ್ ಹಾಗೂ ನಾಯಕ ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 46 ರನ್ ಜೊತೆಯಾಟ ನೀಡಿದರು. ಡಿಕಾಕ್ 30 ರನ್ ಸಿಡಿಸಿ ಔಟಾದರು.

ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ರೋಹಿತ್‌ಗೆ ಸೂರ್ಯಕುಮಾರ್ ಯಾದವ್ ಉತ್ತಮ ಸಾಥ್ ನೀಡಿದರು. ರೋಹಿತ್ ಅಜೇಯ 55 ರನ್ ಹಾಗೂ ಸೂರ್ಯಕುಮಾರ್ ಅಜೇಯ 46 ರನ್ ಸಿಡಿಸಿದರು. 16.1 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. 9 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ ಮುಂಬೈ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು. ಇತ್ತ ಕೆಕೆಆರ್ ಟೂರ್ನಿಗೆ ವಿದಾಯ ಹೇಳಿದರೆ, ಸನ್‌ರೈಸರ್ಸ್ ತಂಡ ರನ್‌ರೇಟ್ ಆಧಾರದಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?