IPL 2019: CSKಗೆ 176 ರನ್ ಟಾರ್ಗೆಟ್ ನೀಡಿದ SRH

Published : Apr 23, 2019, 09:35 PM IST
IPL 2019: CSKಗೆ 176 ರನ್ ಟಾರ್ಗೆಟ್ ನೀಡಿದ SRH

ಸಾರಾಂಶ

ಮನೀಶ್ ಪಾಂಡೆ ಅಬ್ಬರ, ಡೇವಿಡ್ ವಾರ್ನರ್ ಹಾಫ್ ಸೆಂಚುರಿಯಿಂದ ಸನ್ ರೈಸರ್ಸ್ ಹೈದರಾಬಾದ್, CSK ವಿರುದ್ದ 175 ರನ್ ಸಿಡಿಸಿದೆ. CSK ಬೌಲಿಂಗ್ ದಾಳಿ ಹಾಗೂ ಹೈದರಾಬಾದ್ ಬ್ಯಾಟಿಂಗ್ ಪ್ರರದರ್ಶನದ ಹೈಲೈಟ್ಸ್ ಇಲ್ಲಿದೆ.

ಚೆನ್ನೈ(ಏ.23): ಕನ್ನಡಿಗ ಮನೀಶ್ ಪಾಂಡೆ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ನಡೆಯುತ್ತಿರುವ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ದಿಟ್ಟ ಹೋರಾಟ ನೀಡುವಲ್ಲಿ ಯಶಸ್ವಿಯಾಗಿದೆ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ SRH 3 ವಿಕೆಟ್ ನಷ್ಟಕ್ಕೆ 175 ರನ್ ಸಿಡಿಸಿದೆ. 

ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್  ಟಾಸ್ ಸೋತು ಬ್ಯಾಟಿಂಗ್ ಇಳಿಯಿತು. ಜಾನಿ ಬೈರ್‌ಸ್ಟೋ ಶೂನ್ಯಕ್ಕೆ ಔಟಾದರು. ಈ ಮೂಲಕ ಆರಂಭದಲ್ಲೇ ಆಘಾತ  ಅನುಭವಿಸಿತು. ಆದರೆ ಡೇವಿಡ್ ವಾರ್ನರ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ವಾರ್ನರ್ 45 ಎಸೆತದಲ್ಲಿ 57 ರನ್ ಸಿಡಿಸಿ ಔಟಾದರು.

ವಾರ್ನರ್ ವಿಕೆಟ್ ಪತನದ ಬಳಿಕ ಮನೀಶ್ ಪಾಂಡೆ ಅಬ್ಬರ ಆರಂಭಗೊಂಡಿತು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಪಾಂಡೆ ಹಾಫ್ ಸೆಂಚುರಿ ಸಿಡಿಸಿದರು. ಇತ್ತ ವಿಜಯ್ ಶಂಕರ್ 26 ರನ್ ಸಿಡಿಸಿ ಔಟಾದರು. ಅಬ್ಬರಿಸಿದ ಪಾಂಡೆ 49 ಎಸೆತದಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಮೂಲಕ ಅಜೇಯ  83 ರನ್ ಸಿಡಿಸಿದರು. ಈ ಮೂಲಕ SRH 3 ವಿಕೆಟ್ ನಷ್ಟಕ್ಕೆ 175 ರನ್ ಸಿಡಿಸಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?