IPL 2019: ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್!

Published : Mar 28, 2019, 09:33 PM IST
IPL 2019: ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್!

ಸಾರಾಂಶ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಹಿರಿಯ ಆಲ್ರೌಂಡರ್ ಯುವರಾಜ್ ಸಿಂಗ್ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸ್ಫೋಟಕ ಬ್ಯಾಟಿಂಗ್ ಮೂಲಕ ಯುವಿ ಘರ್ಜಿಸಿದ್ದಾರೆ. ಯುವಿ ಪ್ರದರ್ಶನ ಹೇಗಿತ್ತು? ಇಲ್ಲಿದೆ  

ಬೆಂಗಳೂರು(ಮಾ.28): ಬೆಂಗಳೂರಿನಲ್ಲಿ ನಡೆಯುತ್ತಿರುವ RCB ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. 14ನೇ ಓವರ್‌ನಲ್ಲಿ ಯಜುವೇಂದ್ರ ಚೆಹಾಲ್‌ನ ಆರಂಭಿಕ 3 ಎಸೆತಗಳನ್ನ ಸಿಕ್ಸರ್ ಸಿಡಿಸಿ ಅಬ್ಬರಿಸಿದರು. ಈ ಮೂಲಕ ಮತ್ತೆ 6 ಎಸೆತಗಳನ್ನೂ ಬೌಂಡರಿ ಗೆರೆ ದಾಟಿಸೋ ಸೂಚನೆ ನೀಡಿದ್ದರು.

ಇದನ್ನೂ ಓದಿ: ಚುನಾವಣಾ ತಯಾರಿ ನಡುವೆ RCB ಪಂದ್ಯಕ್ಕೆ ಹಾಜರಾದ ಸಿದ್ದರಾಮಯ್ಯ!

4ನೇ ಎಸೆತದಲ್ಲೂ ಸಿಕ್ಸರ್ ಸಿಡಿಸಿಲು ಹೋದ ಯುವರಾಜ್ ಸಿಂಗ್ ಬೌಂಡರಿ ಗೆರೆ ಬಳಿ ಕ್ಯಾಚ್ ನೀಡಿದರು. ಈ ಮೂಲಕ ಯುವರಾಜ್ 12 ಎಸೆತದಲ್ಲಿ23 ರನ್ ಸಿಡಿಸಿ ಔಟಾದರು. ಆದರೆ ಯುವಿ 3 ಸಿಕ್ಸರ್‌ಗೆ ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳು ಸಂಭ್ರಮಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡಿದ ಪೀಟರ್ಸನ್!

ಡೆಲ್ಲಿ ವಿರುದ್ಧದ ಮೊದಲ ಪಂದ್ಯದಲ್ಲಿ 35 ಎಸೆತದಲ್ಲಿ 5 ಬೌಂಡರಿ, 3 ಸಿಕ್ಸರ್ ಮೂಲಕ 53 ರನ್ ಸಿಡಿಸಿದ್ದರು. ಈ ಮೂಲಕ ಏಕಾಂಗಿ ಹೋರಾಟ ನೀಡಿದ್ದರು. ಇದೀಗ 2ನೇ ಪಂದ್ಯದಲ್ಲಿ ಯುವಿ ಅಬ್ಬರಿಸಿದ್ದಾರೆ. ಈ ಮೂಲಕ ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಯಾಮ್ಸನ್ ಪವರ್‌ಗೆ ವಿಂಡೀಸ್ ಉಡೀಸ್, ಸೆಮಿಫೈನಲ್ ಪ್ರವೇಶಿಸಿದ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ
ಗೆಲ್ಲಲೇಬೇಕಾದ ಪಂದ್ಯದಲ್ಲಿ ಭಾರತಕ್ಕೆ 196 ರನ್ ಟಾರ್ಗೆಟ್, ಕೋಲ್ಕತಾ ಚೇಸ್ ರೆಕಾರ್ಡ್ ಏನು?