
ಮುಂಬೈ[ಏ.04]: ಭಾರತದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯ ಭಾರತ-ಪಾಕಿಸ್ತಾನ ಪಂದ್ಯವಿದ್ದಂತೆ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ.
‘ನಾನು ಮುಂಬೈ ತಂಡದಲ್ಲಿದ್ದಾಗ, ಚೆನ್ನೈ ವಿರುದ್ಧ ಪ್ರತಿ ಪಂದ್ಯವನ್ನು ಗೆಲ್ಲಲೇಬೇಕು ಎಂಬ ಹಠದೊಂದಿಗೆ ಆಡುತ್ತಿದ್ದೆ. ಆದರೀಗ ಚೆನ್ನೈ ತಂಡದಲ್ಲಿ ಇರುವ ಕಾರಣ, ಮುಂಬೈ ವಿರುದ್ಧ ಗೆಲ್ಲಲೇಬೇಕು ಎನ್ನುವ ಮನಸ್ಥಿತಿಯೊಂದಿಗೆ ಆಡುತ್ತೇನೆ. ಎರಡು ತಂಡಗಳ ನಡುವೆ ಅಷ್ಟೊಂದು ವೈರತ್ವವಿದೆ’ ಎಂದು ಹರ್ಭಜನ್ ಹೇಳಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಐಪಿಎಲ್ ಪಂದ್ಯವನ್ನು ಭಾರತ-ಪಾಕ್ ಪಂದ್ಯಕ್ಕೆ ಹೋಲಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಬಾನಿ ಮಗನ ಮದುವೆ: ಟಿ20ಗೆ ಯುವಿ, ಭಜ್ಜಿ ಚಕ್ಕರ್
2018ನೇ ಸಾಲಿನ ಐಪಿಎಲ್ ಟೂರ್ನಿಗೂ ಮುನ್ನ ನಡೆದ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಹರ್ಭಜನ್ ಸಿಂಗ್ ಅವರನ್ನು ಕೈಬಿಟ್ಟಿತ್ತು. ಹೀಗಾಗಿ ಚೆನ್ನೈ ಸೂಪರ್’ಕಿಂಗ್ಸ್ 2 ಕೋಟಿ ನೀಡಿ ಆಪ್’ಸ್ಪಿನ್ನರ್ ಅವರನ್ನು ಖರೀದಿಸಿತ್ತು. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಮತ್ತೊಮ್ಮೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್’ಕಿಂಗ್ಸ್ ತಂಡವನ್ನು ಮಣಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.