
ಚೆನ್ನೈ[ಮಾ.19]: ಅಭಿಮಾನಿಗಳಲ್ಲಿ ಐಪಿಎಲ್ ಜ್ವರ ಶುರುವಾಗಿದ್ದು, ಚೆನ್ನೈನಲ್ಲಿ ಸ್ವಲ್ಪ ಹೆಚ್ಚಾಗಿಯೇ ಇದೆ.
ಭಾನುವಾರ ಸಿಎಸ್‌ಕೆ ತಂಡದ ಅಭ್ಯಾಸ ಪಂದ್ಯವನ್ನು ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಚೆಪಾಕ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಯೊಬ್ಬ ಎಂ.ಎಸ್.ಧೋನಿಯನ್ನು ಅಪ್ಪಿಕೊಂಡು ಸೆಲ್ಫಿ ತೆಗೆದುಕೊಳ್ಳಲು ಮೈದಾನಕ್ಕೆ ನುಗ್ಗಿದ. ಧೋನಿ ಆ ಅಭಿಮಾನಿಯನ್ನು ಮೈದಾನದ ತುಂಬಾ ಓಡಾಡಿಸಿದರು. ಕೊನೆಗೆ ಅಭಿಮಾನಿಯ ಕೈಕುಲುಕಿದ ಧೋನಿ ಆತನ ಆಸೆ ಈಡೇರಿಸಿದರು.
ಸೆಕ್ಯೂರಿಟಿ ಕಣ್ತಪ್ಪಿಸಿ ಒಳ ನುಗ್ಗಿದ ಅಭಿಮಾನಿ ಜೊತೆ ಧೋನಿ ಫನ್!
ಭದ್ರತಾ ಸಿಬ್ಬಂದಿ ಅಭಿಮಾನಿಯನ್ನು ಮೈದಾನದಿಂದ ಹೊರಕರೆದೊಯ್ದರು. ಈ ವಿಡಿಯೋವನ್ನು ಸಿಎಸ್‌ಕೆ ತಂಡ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಾಕಿದ್ದು, ಭಾರೀ ವೈರಲ್ ಆಗಿದೆ. ಇತ್ತೀಚೆಗೆ ನಾಗ್ಪುರದಲ್ಲಿ ಆಸ್ಪ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದ ವೇಳೆಯೂ ಇಂತದ್ದೇ ಪ್ರಸಂಗ ನಡೆದಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.