
ಚೆನ್ನೈ(ಮೇ.07): 12ನೇ ಆವೃತ್ತಿ ಐಪಿಎಲ್ ಟೂರ್ನಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಚಿಪಾಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಉತ್ತಮ ಪ್ರದರ್ಶದ ಮೂಲಕ ಮುಂಬೈ ಇಂಡಿಯನ್ಸ್, ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 6 ವಿಕೆಟ್ ಗೆಲುವು ಸಾಧಿಸಿದೆ.
ಗೆಲುವಿಗೆ 132 ರನ್ ಟಾರ್ಗೆಟ್ ಪಡೆದ ಮುಂಬೈ ಇಂಡಿಯನ್ಸ್, ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಯಿತು. ನಾಯಕ ರೋಹಿತ್ ಶರ್ಮಾ ಕೇವಲ 4 ರನ್ ಸಿಡಿಸಿ ಔಟಾದರೆ, ಕ್ವಿಂಟನ್ ಡಿಕಾಕ್ 8 ರನ್ ಸಿಡಿಸಿ ನಿರ್ಗಮಿಸಿದರು. 21 ರನ್‌ಗೆ 2 ವಿಕೆಟ್ ಕಳೆದುಕೊಂಡ ಮುಂಬೈ ಒತ್ತಡಕ್ಕೆ ಸಿಲುಕಿತು.
ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಜೊತೆಯಾಟ ಮುಂಬೈ ಗೆಲುವಿನ ಆಸೆ ಮತ್ತೆ ಚಿಗುರಿಸಿತು. ಸೂರ್ಯಕುಮಾರ್ ಅರ್ಧಶತಕ ಸಿಡಿಸಿ ಮಿಂಚಿದರು. ಇತ್ತ ಇಶಾನ್ ಕಿಶನ್ ಉತ್ತಮ ಸಾಥ್ ನೀಡಿದರು. ಈ ಮೂಲಕ 3ನೇ ವಿಕೆಟ್‌ಗೆ ಈ ಜೋಡಿ 80 ರನ್ ಜೊತೆಯಾಟ ನೀಡಿತು.
ಇಶಾನ್ ಕಿಶನ್ 28 ರನ್ ಸಿಡಿಸಿ ಔಟಾದರು. ಕ್ರುನಾಲ್ ಪಾಂಡ್ಯ ಕೂಡ ಆಸರೆಯಾಗಲಿಲ್ಲ. ಸೂರ್ಯಕುಮಾರ್ ಯಾದವ್ ಜೊತೆ ಸೇರಿ ಇನ್ನಿಂಗ್ಸ್ ಕಟ್ಟಿದ ಹಾರ್ದಿಕ್ ಪಾಂಡ್ಯ ಮುಂಬೈ ಗೆಲುವಿನ ಹಾದಿ ಸುಗಮಗೊಳಿಸಿದರು. ಸೂರ್ಯಕುಮಾರ್ ಅಜೇಯ 71 ರನ್ ಸಿಡಿಸಿದರೆ, ಹಾರ್ದಿಕ್ 13 ರನ್ ಭಾರಿಸಿದರು. ಈ ಮೂಲಕ ಮುಂಬೈ ಇನ್ನೂ 9 ಎಸೆತ ಬಾಕಿ ಇರುವಂತೆ 6 ವಿಕೆಟ್ ಗೆಲುವು ಸಾಧಿಸಿತು.
ಭರ್ಜರಿ ಗೆಲುವಿನ ಮೂಲಕ ಮುಂಬೈ 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿತು. ಇತ್ತ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ವಿನ್ನರ್ ಜೊತೆ 2ನೇ ಕ್ವಾಲಿಫೈಟರ್ ಪಂದ್ಯ ಆಡಿ ಫೈನಲ್ ಪ್ರವೇಶಿಸಲು ಅವಕಾಶವಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.