IPL 2019: RCB ಗೆಲುವಿಗೆ 188 ರನ್ ಟಾರ್ಗೆಟ್ ನೀಡಿದ ಮುಂಬೈ!

Published : Mar 28, 2019, 09:54 PM ISTUpdated : Mar 28, 2019, 10:04 PM IST
IPL 2019: RCB ಗೆಲುವಿಗೆ 188 ರನ್ ಟಾರ್ಗೆಟ್ ನೀಡಿದ ಮುಂಬೈ!

ಸಾರಾಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯುತ್ತಿರುವ ಐಪಿಎಲ್ ಲೀಗ್ ಪಂದ್ಯದಲ್ಲಿ ಮುಂಬೈ 187 ರನ್ ಸಿಡಿಸಿದೆ. ಯಜುವೇಂದ್ರ ಚಹಾಲ್ ಮೋಡಿಗೆ ತತ್ತರಿಸಿದ ಮುಂಬೈಗೆ ಹಾರ್ದಿಕ್ ಪಾಂಡ್ಯ ಚೇತರಿಕೆ ನೀಡಿದರು. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.  

ಬೆಂಗಳೂರು(ಮಾ.28): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆರಂಭಿಕ ಹಂತದಲ್ಲಿ ಅಬ್ಬರಿಸಿ ಬಳಿಕ ದಿಢೀರ್ ವಿಕೆಟ್ ಪನತಕ್ಕೆ ಗುರಿಯಾದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿದೆ. ಈ ಮೂಲಕ RCB ಗೆಲುವಿಗೆ 188 ರನ್ ಟಾರ್ಗೆಟ್ ನೀಡಿದೆ. 

ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈಗೆ ನಾಯಕ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿಕಾಕ್ 54 ರನ್ ಜೊತೆಯಾಟ ನೀಡಿದರು. ಡಿಕಾಕ್ 23 ರನ್ ಸಿಡಿಸಿ ಔಟಾದರು. ಆದರೆ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶದ ಮೂಲಕ 33 ಎಸೆತದಲ್ಲಿ 48 ರನ್ ಸಿಡಿಸಿದರು.

ಇದನ್ನೂ ಓದಿ: ಚುನಾವಣಾ ತಯಾರಿ ನಡುವೆ RCB ಪಂದ್ಯಕ್ಕೆ ಹಾಜರಾದ ಸಿದ್ದರಾಮಯ್ಯ!

ಹ್ಯಾಟ್ರಿಕ್ ಸಿಕ್ಸರ್ ಮೂಲಕ ಅಬ್ಬರಿಸಿದ ಯುವರಾಜ್ ಸಿಂಗ್ 23 ರನ್ ಸಿಡಿಸಿ ಔಟಾದರು. ಆಸರೆಯಾಗಿದ್ದ ಸೂರ್ಯಕುಮಾರ್ ಯಾದವ್ 38 ರನ್ ಸಿಡಿಸಿ ಔಟಾದರು. ಬೃಹತ್ ಮೊತ್ತದ ಸೂಚನೆ ನೀಡಿದ್ದ ಮುಂಬೈ, ಯಜುವೇಂದ್ರ ಚಹಾಲ್ ದಾಳಿಗೆ ತತ್ತರಿಸಿ,ದಿಢೀರ್ ಕುಸಿತ ಕಂಡಿತು.

ಇದನ್ನೂ ಓದಿ: IPL 2019: ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್!

ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ ಹಾಗೂ ಮೆಚೆಲ್ ಮೆಕ್ಲೆನಾಘನ್ ಅಬ್ಬರಿಸಲಿಲ್ಲ. ಆದರೆ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ಮೂಲಕ ಮುಂಬೈಗೆ ಚೇತರಿಕೆ ನೀಡಿದರು. 14 ಎಸೆತಗದಲ್ಲಿ ಹಾರ್ದಿಕ್ 2 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಅಜೇಯ 32 ರನ್ ಚಚ್ಚಿದರು. ಇದರೊಂದಿಗೆ ಮುಂಬೈ 8 ವಿಕೆಟ್ ನಷ್ಟಕ್ಕೆ 187 ರನ್ ಸಿಡಿಸಿತು. RCB ಗೆಲುವಿಗೆ ತವರಿನಲ್ಲಿ 188 ರನ್ ಅವಶ್ಯಕತೆ ಇದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

29 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಕ್ವಾಷ್‌ ವಿಶ್ವಕಪ್‌ ಗೆದ್ದ ಭಾರತ!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!