
ಹೈದರಾಬಾದ್(ಏ.06): ಕಳೆದ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನೇ ಸೋಲಿಸಿ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್‌ನಲ್ಲಿ ಮುಗ್ಗರಿಸಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ 7 ವಿಕೆಟ್ ನಷ್ಟಕ್ಕೆ 137 ರನ್ ಸಿಡಿಸಿದೆ. ಈ ಮೂಲಕ ಹೈದರಾಬಾದ್ ತಂಡಕ್ಕೆ ಸುಲಭ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈ 21 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು. ನಾಯಕ ರೋಹಿತ್ ಶರ್ಮಾ 11 ರನ್‌ಗಳಿಗೆ ಔಟಾದರು. 28 ರನ್‌ಗೆ 2ನೇ ವಿಕೆಟ್ ಪತನಗೊಂಡಿತು. ಸೂರ್ಯಕುಮಾರ್ 7 ರನ್ ಸಿಡಿಸಿ ಔಟಾದರು. ಕ್ವಿಂಟನ್ ಡಿಕಾಕ್ 19, ಕ್ರುನಾಲ್ ಪಾಂಡ್ಯ 6, ಇಶಾನ್ ಕಿಶನ್ 17 ಹಾಗೂ ಹಾರ್ದಿಕ್ ಪಾಂಡ್ಯ 14 ರನ್ ಸಿಡಿಸಿ ಔಟಾದರು.
ಮುಂಬೈ ಇಂಡಿಯನ್ಸ್ ತಂಡದ ಯಾವ ಬ್ಯಾಟ್ಸ್‌ಮನ್‌ಗಳು ಹೋರಾಟ ನೀಡಲಿಲ್ಲ. ಪ್ರತಿಯೊಬ್ಬರು ರನ್‌ಗಾಗಿ ಪರದಾಡಿದರು. ಆದರೆ ಕೀರನ್ ಪೊಲಾರ್ಡ್ ಹೋರಾಟ ನೀಡಿದರು. ಭರ್ಜರಿ 4 ಸಿಕ್ಸರ್ ಸಿಡಿಸೋ ಮೂಲಕ 26 ಎಸೆತದಲ್ಲಿ ಅಜೇಯ 46 ರನ್ ಸಿಡಿಸಿದರು. ಹೀಗಾಗಿ ಮುಂಬೈ ಇಂಡಿಯನ್ಸ್ 7 ವಿಕೆಟ್ ನಷ್ಟಕ್ಕೆ 136 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.