IPL 2019: CSKಗೆ 156 ರನ್ ಟಾರ್ಗೆಟ್ ನೀಡಿದ ಮುಂಬೈ

By Web DeskFirst Published Apr 26, 2019, 9:42 PM IST
Highlights

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಲೀಗ್ ಹೋರಾಟದಲ್ಲಿ ಮುಂಬೈ ಇಂಡಿಯನ್ಸ್ 155 ರನ್ ಸಿಡಿಸಿದೆ. ಚೆನ್ನೈ ಚಿಪಾಕ್ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಹೇಗಿತ್ತು? ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

ಚೆನ್ನೈ(ಏ.26): ಚೆನ್ನೈ ಸೂಪರ್ ಕಿಂಗ್ಸ್ ಅದ್ಬುತ ಬೌಲಿಂಗ್ ದಾಳಿ ನಡುವೆಯೂ ನಾಯಕ ರೋಹಿತ್ ಶರ್ಮಾ ಹೋರಾಟ ನೀಡಿದ್ದಾರೆ. ಮುಂಬೈಕರ್ ಸಿಡಿಸಿದ 67 ರನ್ ನೆರವಿನಿಂದ ಮುಂಬೈ ಇಂಡಿಯನ್ಸ್ 4 ವಿಕೆಟ್ ನಷ್ಟಕ್ಕೆ155ರನ್ ಸಿಡಿಸಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್‌ಗೆ 156 ರನ್ ಟಾರ್ಗೆಟ್ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಕ್ವಿಂಟನ್ ಡಿಕಾಕ್ 15 ರನ್ ಸಿಡಿಸಿ ಔಟಾದರು. ಆದರೆ ನಾಯಕ ರೋಹಿತ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವಿನ್ ಲಿವಿಸ್ ಕೂಡ ಉತ್ತಮ ಸಾಥ್ ನೀಡಿದರು. ಆದರೆ ಲಿವಿಸ್ 32 ರನ್ ಸಿಡಿಸಿ ಔಟಾದರು.

ಕ್ರುನಾಲ್ ಪಾಂಡ್ಯ 1 ರನ್‌ಗೆ ಸುಸ್ತಾದರು. ರೋಹಿತ್ ಶರ್ಮಾ ಅರ್ಧಶತಕ ಸಿಡಿಸಿ ಆಸರೆಯಾದರು. ಆದರೆ ರೋಹಿತ್ 48 ಎಸೆತದಲ್ಲಿ 67 ರನ್ ಸಿಡಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಅಜೇಯ 23 ರನ್ ಹಾಗೂ ಕೀರನ್ ಪೊಲಾರ್ಡ್  ಅಜೇಯ 13 ರನ್ ಸಿಡಿಸಿದರು ಈ ಮೂಲಕ ಮುಂಬೈ 4 ವಿಕೆಟ್ ನಷ್ಟಕ್ಕೆ155  ರನ್ ಸಿಡಿಸಿತು.
 

click me!