ಗೆಲುವಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್’ಗೆ ಶಾಕ್..!

Published : Mar 29, 2019, 01:16 PM IST
ಗೆಲುವಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್’ಗೆ ಶಾಕ್..!

ಸಾರಾಂಶ

ಮುಂಬೈನ ವಾಂಖೆಡೆ ಮೈದಾನದಲ್ಲಿ ಮೊದಲ ಪಂದ್ಯ ಸೋತಿದ್ದ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಜಯದ ಹಳಿಗೆ ಮರಳಿದೆ. ಇದರ ಬೆನ್ನಲ್ಲೇ ರೋಹಿತ್ ಪಡೆಗೆ ಹಿನ್ನಡೆಯೊಂದು ಎದುರಾಗಿದೆ.

ಮುಂಬೈ[ಮಾ.279]: 3 ಬಾರಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಐಪಿಎಲ್ ಟೂರ್ನಿಯಲ್ಲಿ RCB ಮೊದಲ ಗೆಲುವು ದಾಖಲಿಸಿದ ಬೆನ್ನಲ್ಲೇ ಆಘಾತವೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಆ್ಯಡಂ ಮಿಲ್ನೆ ತಂಡದಿಂದ ಹೊರಬಿದ್ದಿದ್ದಾರೆ.

ನ್ಯೂಜಿಲೆಂಡ್‌ ವೇಗಿ ಆ್ಯಡಂ ಮಿಲ್ನೆ ಗಾಯಗೊಂಡು ಈ ಆವೃತ್ತಿಯಿಂದ ಹೊರಬಿದ್ದಿರುವುದು ರೋಹಿತ್ ಪಡೆಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಆಟಗಾರರ ಹರಾಜಿನಲ್ಲಿ ಮಿಲ್ನೆ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 75 ಲಕ್ಷ ನೀಡಿ ಖರೀದಿಸಿತ್ತು. 

ವ್ಯರ್ಥವಾಯ್ತು ABD ಹೋರಾಟ- RCBಗೆ ವಿರೋಚಿತ ಸೋಲು

ನ್ಯೂಜಿಲೆಂಡ್‌ ವೇಗಿ ಆ್ಯಡಂ ಮಿಲ್ನೆ ಗಾಯಗೊಂಡು ಈ ಆವೃತ್ತಿಯಿಂದ ಹೊರಬಿದ್ದ ಕಾರಣ, ಅವರ ಬದಲಿಗೆ ವಿಂಡೀಸ್‌ನ ಯುವ ವೇಗಿ ಅಲ್ಜಾರಿ ಜೋಸೆಫ್‌ಗೆ ಅವಕಾಶ ನೀಡಲಾಗಿದೆ. ವಿಂಡೀಸ್‌ ಪರ 9 ಟೆಸ್ಟ್‌, 16 ಏಕದಿನ ಪಂದ್ಯಗಳನ್ನು ಆಡಿರುವ ಜೋಸೆಫ್‌, 2016ರಲ್ಲಿ ತಂಡದ ಅಂಡರ್‌-19 ವಿಶ್ವಕಪ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಮೊದಲ ಬಾರಿಗೆ ಅವರು ಐಪಿಎಲ್‌ ತಂಡವೊಂದರಲ್ಲಿ ಸ್ಥಾನ ಪಡೆದಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ಮೊದಲ ಪಂದ್ಯ ಸೋತಿದ್ದ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಜಯದ ಹಳಿಗೆ ಮರಳಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

29 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಕ್ವಾಷ್‌ ವಿಶ್ವಕಪ್‌ ಗೆದ್ದ ಭಾರತ!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!