
ಜೈಪುರ(ಏ.02): 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಗೆಲುವಿನ ಸಿಹಿ ಕಂಡಿದೆ. ಸತತ 3 ಪಂದ್ಯ ಸೋತು ನಿರಾಸೆ ಅನುಭವಿಸಿದ್ದ ಬೆಂಗಳೂರು 4ನೇ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದದ ಪಂದ್ಯದಲ್ಲಿ RCB ರನ್ ಗೆಲುವು ದಾಖಲಿಸಿದೆ. ಇದರೊಂದಿಗೆ ರಾಜಸ್ಥಾನ ರಾಯಲ್ಸ್ ಸೋಲಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
RCB ನೀಡಿದ 159 ರನ್ ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್, ಉತ್ತಮ ಆರಂಭ ಪಡೆಯಿತು.
ನಾಯಕ ಅಜಿಂಕ್ಯ ರಹಾನೆ ಹಾಗೂ ಜೋಸ್ ಬಟ್ಲರ್ ಮೊದಲ ವಿಕೆಟ್‌ಗೆ 60 ರನ್ ಜೊತೆಯಾಟ ನೀಡಿದರು. ಆದರೆ ರಹಾನೆ 22 ರನ್ ಸಿಡಿಸಿ ಔಟಾದರು. ತಂಡಕ್ಕೆ ಆಸರೆಯಾದ ಜೋಸ್ ಬಟ್ಲರ್ ಅರ್ಧಶತಕ ಸಿಡಿಸಿದರು.
ಬಟ್ಲರ್ 59 ರನ್ ಸಿಡಿಸಿ ಔಟಾದರು. ಆದರೆ ಸ್ಟೀವ್ ಸ್ಮಿತ್ ಹಾಗೂ ರಾಹುಲ್ ತ್ರಿಪಾಠಿ ಜೊತೆಯಾಟದಿಂದ ರಾಜಸ್ಥಾನ ರಾಯಲ್ಸ್ ಗೆಲುವಿನತ್ತ ಹೆಜ್ಜೆ ಇಟ್ಟಿತು. ಇತ್ತ RCB ಪಂದ್ಯದಲ್ಲಿ ಮೇಲುಗೈ ಸಾಧಿಸಲು ಕಠಿಣ ಹೋರಾಟ ನಡೆಸಿತು. ಆದರೆ ಕ್ಯಾಚ್ ಕೈಚೆಲ್ಲಿ ದುಬಾರಿಯಾದರು. ಕಳಪೆ ಫೀಲ್ಡಿಂಗ್ RCB ಹಿನ್ನಡೆಗೆ ಕಾರಣಾಯಿತು.
ಆಸರೆಯಾಗಿದ್ದ ಸ್ಟೀವ್ ಸ್ಮಿತ್ 38 ರನ್ ಸಿಡಿಸಿ ಔಟಾದರು. ರಾಜಸ್ಥಾನ ಗೆಲುವಿಗೆ ಅಂತಿಮ 6 ಎಸೆತಕ್ಕೆ 5 ರನ್ ಬೇಕಿತ್ತು. ರಾಹುಲ್ ತ್ರಿಪಾಠಿ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್‌ನಿಂದ ಗೆಲುವಿನ ದಡ ಸೇರಿತು. ರಾಜಸ್ಥಾನ ರಾಯಲ್ಸ್ 19.4 ಓವರ್‌ಗಳಲ್ಲಿ 7 ವಿಕೆಟ್ ಗೆಲುವು ಸಾಧಿಸಿತು. ತ್ರಿಪಾಠಿ ಅಜೇಯ 34 ರನ್ ಸಿಡಿಸಿದರು. ರಾಜಸ್ಥಾನ ಮೊದಲ ಗೆಲುವು ಸಾಧಿಸಿದರೆ, RCB ಮಾತ್ರ 4ನೇ ಸೋಲಿಗೆ ಗುರಿಯಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.