IPL 2019: ಟಾಸ್ ಗೆದ್ದ ರಾಜಸ್ಥಾನ ಫೀಲ್ಡಿಂಗ್ ಆಯ್ಕೆ- ರೋಹಿತ್ ವಾಪಾಸ್!

By Web DeskFirst Published Apr 13, 2019, 3:33 PM IST
Highlights

IPL 2019ರ ಐಪಿಎಲ್ ಪಂದ್ಯಗಳ ರೋಚಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 27ನೇ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್  ಫೀಲ್ಡಿಂಗ್ ಆಯ್ಕೆ ಮಾಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ಮುಂಬೈ(ಏ.13): 12ನೇ ಐಪಿಎಲ್ ಟೂರ್ನಿಯ 27 ಲೀಗ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ.  ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ನಾಯಕ ರೋಹಿತ್ ಶರ್ಮಾ ತಂಡ ಸೇರಿಕೊಂಡಿದ್ದಾರೆ.  

ಮುಂಬೈ ಇಂಡಿಯನ್ಸ್ ಆಡಿದ 6 ಪಂದ್ಯಗಳಲ್ಲಿ 4 ರಲ್ಲಿ ಗೆಲುವು ಸಾಧಿಸೋ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಆದರೆ ರಾಜಸ್ಥಾನ ರಾಯಲ್ಸ್ ಕತೆ, ರಾಯಲ್ ಚಾಲೆಂಜರ್ಸ್ ತಂಡಕ್ಕಿಂತ ಭಿನ್ನವಾಗಿಲ್ಲ. ಆಡಿದ 6 ಪಂದ್ಯದಲ್ಲಿ RCB ವಿರುದ್ದದ ಪಂದ್ಯ ಹೊರತು ಪಡಿಸಿದರೆ ಉಳಿದೆಲ್ಲಾ ಪಂದ್ಯಗನ್ನು ಸೋತು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. 

click me!