
ಬೆಂಗಳೂರು(ಏ.05): ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗತವೈಭವ ಮರುಕಳಿಸಿದೆ. 12ನೇ ಆವೃತ್ತಿ ಫಾರ್ಮ್ ಕಳೆದುಕೊಂಡಿದ್ದ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅಬ್ಬರಕ್ಕೆ ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ಬೆಚ್ಚಿ ಬಿದ್ದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ RCB 3 ವಿಕೆಟ್ ನಷ್ಟಕ್ಕೆ 205 ರನ್ ಸಿಡಿಸಿದೆ.
ನಾಯಕ ವಿರಾಟ್ ಕೊಹ್ಲಿ ಹಾಗೂ ಪಾರ್ಥೀವ್ ಪಟೇಲ್ ಅತ್ಯತ್ತಮ ಆರಂಭ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿತು. ಪಾರ್ಥೀವ್ ಪಟೇಲ್ 25 ರನ್ ಸಿಡಿಸಿ ಔಟಾದರು. ಆದರೆ ಈ ಜೋಡಿ ಮೊದಲ ವಿಕೆಟ್‌ಗೆ 64 ರನ್ ಜೊತೆಯಾಟ ನೀಡಿದರು. ಪಟೇಲ್ ಬಳಿಕ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅಬ್ಬರ ಆರಂಭವಾಯಿತು.
ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೊಹ್ಲಿ ಹಾಗೂ ಎಬಿಡಿ ಅರ್ಧಶತಕ ಸಿಡಿಸಿ ಮಿಂಚಿದರು. ಕೊಹ್ಲಿ 49 ಎಸೆತದಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 84 ರನ್ ಸಿಡಿಸಿ ಔಟಾದರು. ಎಬಿ ಡಿವಿಲಿಯರ್ಸ್ 32 ಎಸೆತದಲ್ಲಿ5 ಬೌಂಡರಿ ಹಾಗೂ 4 ಸಿಕ್ಸರ್ ಮೂಲಕ 63 ರನ್ ಸಿಡಿಸಿ ಔಟಾದರು. ಮಾರ್ಸಸ್ ಸ್ಟೊಯ್ನಿಸ್ ಸಿಡಿಸಿ ಅಜೇಯ 28 ರನ್ ನೆರವಿಂದ ಬೆಂಗಳೂರು 3 ವಿಕೆಟ್ ನಷ್ಟಕ್ಕೆ 205ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.