
ಬೆಂಗಳೂರು(ಮೇ.04): 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಪ್ಲೇ ಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ತವರಿನಲ್ಲಿ ಕೊನೆಯ ಪಂದ್ಯ ಆಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಹೋರಾಟ ನಡೆಸಲಿರುವ RCB ಅಂತಿಮ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಬೆಂಗಳೂರು ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಶಿಮ್ರೊನ್ ಹೆಟ್ಮೆಯರ್, ಕೊಲಿನ್ ಡೇ ಗ್ರ್ಯಾಂಡ್‌ಹೊಮ್ಮೆ ಹಾಗೂ ವಾಶಿಂಗ್ಟನ್ ಸುಂದರ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.
ಈ ಆವೃತ್ತಿಯಲ್ಲಿ ಬರೊಬ್ಬರಿ 10 ಟಾಸ್ ಸೋತಿದ್ದ ವಿರಾಟ್ ಕೊಹ್ಲಿ ಅಂತಿಮ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿದ್ದಾರೆ. ಈ ಮೂಲಕ ಸತತ ಟಾಸ್ ಸೋಲಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ಇಷ್ಟೇ ಅಲ್ಲ ಈ ಪಂದ್ಯ ಅಭಿಮಾನಿಗಳಿಗೆ ಅರ್ಪಿಸಿದ್ದಾರೆ. RCB ಸೋಲು ಗೆಲುವಿನಲ್ಲಿ ಅಭಿಮಾನಿಗಳು ತಂಡವನ್ನು ಬೆಂಬಲಿಸಿದ್ದಾರೆ. ವಿಶೇಷವಾಗಿ ಕಳೆದ ಪಂದ್ಯದಲ್ಲಿ ಮಳೆ ಬಂದರೂ ರಾತ್ರಿ 12 ಬಳಿಕವೂ ಅಭಿಮಾನಿಗಳು ತಂಡವನ್ನೂ ಬೆಂಬಲಿಸಿದ್ದಾರೆ. ಹೀಗಾಗಿ ಈ ಪಂದ್ಯ ಅಭಿಮಾನಿಗಳಿಗಾಗಿ ಎಂದು ಕೊಹ್ಲಿ ಟಾಸ್ ಬಳಿಕ ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ 13ರಲ್ಲಿ 4 ಗೆಲುವು ಒಂದು ಪಂದ್ಯ ಮಳೆಯಿಂದ ರದ್ದಾಗಿರೋ ಕಾರಣ 9 ಅಂಕ ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದೀಗ ಅಂತಿಮ ಪಂದ್ಯ ಗೆದ್ದು ಗೆಲುವಿನೊಂದಿಗೆ ವಿದಾಯ ಹೇಳೋ ಲೆಕ್ಕಾಚಾರದಲ್ಲಿದೆ. ಆದರೆ ಹೈದರಾಬಾದ್ ತಂಡಕ್ಕೆ ಪ್ಲೇ ಆಫ್ ಹಾದಿ ಸುಗಮವಾಗಲು ಇಂದು ಗೆಲ್ಲಲೇಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.