
ಮುಂಬೈ(ಏ.10): ಐಪಿಎಲ್ ಟೂರ್ನಿಯಲ್ಲಿಂದು ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮುಖಾಮುಖಿಯಾಗಲಿದೆ. ಪಂದ್ಯ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತವಾಗಿದೆ. ಅಭ್ಯಾಸದ ವೇಳೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಹೀಗಾಗಿ ಇಂದಿನ ಪಂದ್ಯ ಆಡುವುದು ಅನುಮಾನವಾಗಿದೆ.
ಇದನ್ನೂ ಓದಿ: ಬೂಮ್ರಾ ಗಾಯದ ಬಗ್ಗೆ ಆತಂಕ ಬೇಡ: ಬಿಸಿಸಿಐ
ಅಭ್ಯಾಸದ ನಡುವೆ ರೋಹಿತ್ ಶರ್ಮಾ ಇಂಜುರಿಗೆ ತುತ್ತಾದರು. ತಕ್ಷಣವೇ ಮುಂಬೈ ಫಿಸಿಯೋ ನಿತಿನ್ ಪಟೇಲ್ ಮೈದಾನಕ್ಕೆ ಆಗಮಿಸಿ ಪ್ರಾಥಮಿಕಿ ಚಿಕಿತ್ಸೆ ನೀಡಿದರು. ಆದರೆ ರೋಹಿತ್ ನೋವಿನಿಂದ ಅಭ್ಯಾಸ ಮೊಟಕುಗೊಳಿಸಿ ಡ್ರೆಸ್ಸಿಂಗ್ ರೂಂ ಸೇರಿಕೊಂಡರು. ರೋಹಿತ್ ಇಂಜುರಿ ತಂಡದ ಆತಂಕಕ್ಕೆ ಕಾರಣವಾಗಿದೆ. ಪಂಜಾಬ್ ವಿರುದ್ಧದ ಪಂದ್ಯಕ್ಕೆ ಕಣಕ್ಕಿಳಿಯೋದು ಅನುಮಾನವಾಗಿದೆ.
ಇದನ್ನೂ ಓದಿ: ವಿಶ್ವಕಪ್ 2019: ಏ.15ಕ್ಕೆ ಟೀಂ ಇಂಡಿಯಾ ಪ್ರಕಟ!
ರೋಹಿತ್ ಇಂಜುರಿ ವಿಚಾರ ಇದೀಗ ಬಿಸಿಸಿಐ ಹಾಗೂ ನಾಯಕ ವಿರಾಟ್ ಕೊಹ್ಲಿ ಚಿಂತೆಗೂ ಕಾರಣವಾಗಿದೆ. ಎಪ್ರಿಲ್ 15 ರಂದು ವಿಶ್ವಕಪ್ ತಂಡದ ಆಯ್ಕೆ ನಡೆಯಲಿದೆ. ಇದರ ಬೆನ್ನಲ್ಲೇ ರೋಹಿತ್ ಇಂಜುರಿಯಾಗಿದ್ದಾರೆ. ಇಂಜುರಿ ಪ್ರಮಾಣ ಹೆಚ್ಚಾಗಿದ್ದಲ್ಲಿ, ಮೇ 30 ರಂದು ಆರಂಭಗೊಳ್ಳಲಿರುವ ವಿಶ್ವಕಪ್ ಟೂರ್ನಿಗೆ ಅಲಭ್ಯರಾಗುವ ಸಾಧ್ಯತೆ ಇದೆ. ಇದು ಟೀಂ ಇಂಡಿಯಾ ಲೆಕ್ಕಾಚಾರವನ್ನೇ ಬುಡಮೇಲು ಮಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.