
ಹೈದರಾಬಾದ್(ಏ.17): 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಸತತ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ, ಸನ್ ರೈಸರ್ಸ್ ಹೈದರಾಬಾದ್ ಶಾಕ್ ನೀಡಿದೆ. CSK ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ SRH 6 ವಿಕೆಟ್ ಗೆಲುವು ಸಾಧಿಸಿದೆ. ಈ ಮೂಲಕ ಸೋಲಿನಿಂದ ಹೊರಬಂದಿದೆ.
ಧೋನಿ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ CSK ಗೆಲುವಿನ ಗೆರೆ ದಾಟಲಿಲ್ಲ. ಸುರೇಶ್ ರೈನಾ ನಾಯಕತ್ವದ CSK ಕೇವಲ 133 ರನ್ ಟಾರ್ಗೆಟ್ ನೀಡಿತ್ತು. ಸುಲಭ ಟಾರ್ಗೆಟ್ ಪಡೆದ ಸನ್ ರೈಸರ್ಸ್ ಉತ್ತಮ ಆರಂಭ ಪಡೆಯಿತು. ಡೇವಿಡ್ ವಾರ್ನರ್ ಹಾಗೂ ಜಾನಿ ಬೈರ್‌ಸ್ಟೋ 66 ರನ್‌ಗಳ ಜೊತೆಯಾಟ ನೀಡಿದರು. 25 ಎಸೆತದಲ್ಲಿ ವಾರ್ನರ್ 50 ರನ್ ಸಿಡಿಸಿ ನಿರ್ಗಮಿಸಿದರು.
ನಾಯಕ ಕೇನ್ ವಿಲಿಯಮ್ಸನ್ ಕೇವಲ 3 ರನ್ ಸಿಡಿಸಿ ಔಟಾದರು. ವಿಜಯ್ ಶಂಕರ್ 7 ರನ್ ಸಿಡಿಸಿ ಔಟಾದರು. ಆದರೆ ಹೈದರಾಬಾದ್ ತಂಡ ಯಾವುದೇ ಒತ್ತಡಕ್ಕೆ ಸಿಲುಕಲಿಲ್ಲ. ಬೈರ್‌ಸ್ಟೋ ಆರ್ಭಟ ಆರಂಭಗೊಂಡಿತು. ಸ್ಫೋಟಕ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದರು. ಬೈರ್‌ಸ್ಟೋ ಅಜೇಯ 61 ರನ್ ಸಿಡಿಸಿದರು. ಈ ಮೂಲಕ ಸನ್ ರೈಸರ್ಸ್ 16.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.