
ಹೈದರಾಬಾದ್(ಮಾ.31): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಜಾನಿ ಬೈರ್‌ಸ್ಟೋ ಹಾಗೂ ಡೇವಿಡ್ ವಾರ್ನರ್ ಭರ್ಜರಿ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ 2 ವಿಕೆಟ್ ನಷ್ಟಕ್ಕೆ 231 ರನ್ ಸಿಡಿಸಿದೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಲೀಗ್ ಪಂದ್ಯದಲ್ಲಿ RCB ಗೆಲುವಿಗೆ 232 ರನ್ ಸಿಡಿಸಬೇಕಿದೆ.
ಇದನ್ನೂ ಓದಿ: RCB ವಿರುದ್ಧ ಬೈರ್‌ಸ್ಟೋ ಶತಕ- 12ನೇ ಆವೃತ್ತಿಯಲ್ಲಿ ದಾಖಲಾಯ್ತು 2ನೇ ಸೆಂಚುರಿ!
ಟಾಸ್ ಸೋತು ಬ್ಯಾಟಿಂಗ್ ಇಳಿದ SRH ತಂಡಕ್ಕೆ ಡೇವಿಡ್ ವಾರ್ನರ್ ಹಾಗೂ ಜಾನಿ ಬೈರ್‌ಸ್ಟೋ ಅಬ್ಬರಿಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 185 ರನ್ ಸಿಡಿಸಿತು. ಈ ಮೂಲಕ ಐಪಿಎಲ್ ಟೂರ್ನಿಯಲ್ಲಿ ಗರಿಷ್ಟ ಜೊತೆಯಾಟ ಅನ್ನೋ ಹೆಗ್ಗಳಿಕೆಗೂ ಪಾತ್ರವಾಯಿತು. RCB ಬೌಲರ್‌ಗಳನ್ನು ಸುಸ್ತು ಹೊಡೆಸಿದ ಬೈರ್‌ಸ್ಟೋ, ಐಪಿಎಲ್ ಟೂರ್ನಿಯಲ್ಲಿ ಚೊಚ್ಚಲ ಶತಕ ಸಿಡಿಸಿದರು. ಇತ್ತರ ವಾರ್ನರ್ ಆರ್ಧಶತಕ ಸಿಡಿಸಿ ಮಿಂಚಿದರು.
ಇದನ್ನೂ ಓದಿ: ಯಾರು ಈ ಪ್ರಯಾಸ್ ರೇ ಬರ್ಮಾನ್..?
ಬೈರ್‌ಸ್ಟೋ 56 ಎಸೆತದಲ್ಲಿ 12 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ 114 ರನ್ ಸಿಡಿಸಿ ಔಟಾದರು. ಇನ್ನು ಡೇವಿಡ್ ವಾರ್ನರ್ ಆಜೇಯ ರನ್ ಹಾಗೂ ವಿಜಯ್ ಶಂಕರ್ ಅಜೇಯ ರನ್ ಸಿಡಿಸಿದರು. ಈ ಮೂಲಕ SRH ವಿಕೆಟ್ ನಷ್ಟಕ್ಕೆ ರನ್ ಸಿಡಿಸಿತು. RCB ಪರ ಯಜುವೆಂದ್ರ ಚೆಹಾಲ್ ಏಕೈಕ ವಿಕೆಟ್ ಕಬಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.