
ಬೆಂಗಳೂರು(ಫೆ.16): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಕಳೆದ 11 ಆವೃತ್ತಿಗಳಲ್ಲಿ ಆರ್‌ಸಿಬಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ವೈಯುಕ್ತಿಕವಾಗಿ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಹಲವು ದಾಖಲೆ ನಿರ್ಮಿಸಿದ್ದಾರೆ. 2019ರಲ್ಲಿ ಕೊಹ್ಲಿ 3 ದಾಖಲೆ ಪುಡಿ ಮಾಡಲು ಸಜ್ಜಾಗಿದ್ದಾರೆ.
ಇದನ್ನೂ ಓದಿ: ಐಪಿಎಲ್ 2019: ಎಂ.ಎಸ್.ಧೋನಿ ನಿರ್ಮಿಸಲಿದ್ದಾರೆ 4 ಅಪರೂಪದ ದಾಖಲೆ!
ಐಪಿಎಲ್‌ನಲ್ಲಿ ಗರಿಷ್ಠ ರನ್
ಐಪಿಎಲ್ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸಿಡಿಸಿದ ಪಟ್ಟಿಯಲ್ಲಿ ಸುರೇಶ್ ರೈನಾ ಹಾಗೂ ವಿರಾಟ್ ಕೊಹ್ಲಿ ನಡುವೆ ಪೈಪೋಟಿ ಇದೆ. ಸದ್ಯ ರೈನಾ ಐಪಿಎಲ್‌ನಲ್ಲಿ 4985 ರನ್ ಸಿಡಿಸಿದ್ದರೆ, ಕೊಹ್ಲಿ 4948 ರನ್ ಭಾರಿಸಿದ್ದಾರೆ. ಈ ಆವೃತ್ತಿಯಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲೆ ಬರೆಯುವ ಎಲ್ಲಾ ಸಾಧ್ಯತೆ ಇದೆ.
ಇದನ್ನೂ ಓದಿ:2019ರ ವಿಶ್ವಕಪ್‌ಗೆ 18 ಟೀಂ ಇಂಡಿಯಾ ಕ್ರಿಕೆಟಿಗರ ಪಟ್ಟಿ ರೆಡಿ!
ಐಪಿಎಲ್‌ನಲ್ಲಿ ಗರಿಷ್ಠ 50+ ಸ್ಕೋರ್
ಮೊದಲ ಆವೃತ್ತಿಯಿಂದ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದಾರೆ. 2016ರಲ್ಲಿ ಕೊಹ್ಲಿ 973 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. ಇದರಲ್ಲಿ 4 ಶತಕಗಳೂ ಸೇರಿವೆ. ಇದುವರೆಗೆ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ 38 ಬಾರಿ 50+ ಸ್ಕೋರ್ ದಾಖಲಿಸಿದ್ದಾರೆ. ಸದ್ಯ ಮೊದಲ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ 39 ಬಾರಿ 0+ ಸ್ಕೋರ್ ಸಿಡಿಸಿದ್ದಾರೆ.
ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಬೆಂಗಳೂರು ಟಿ20 ಪಂದ್ಯ-ಎಲ್ಲಿ ಸಿಗಲಿದೆ ಟಿಕೆಟ್?
ಐಪಿಎಲ್‌ನಲ್ಲಿ ಗರಿಷ್ಠ ಶತಕ
ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 4 ಶತಕ ಸಿಡಿಸಿದ್ದಾರೆ. ಆದರೆ ವಿಂಡೀಸ್ ದೈತ್ಯ ಕ್ರಿಸ್ ಗೇಲ್ 6 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಈ ಆವೃತ್ತಿಯಲ್ಲಿ ಕೊಹ್ಲಿ ಗೇಲ್ ದಾಖಲೆ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.