
ಬೆಂಗಳೂರು(ಮೇ.05): 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋರಾಟ ಅಂತ್ಯವಾಗಿದೆ. ಅಂತಿಮ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸೋ ಮೂಲಕ ಟೂರ್ನಿಗೆ ವಿದಾಯ ಹೇಳಿತು. ಆದರೆ ಸತತ ಸೋಲು, ತೀವ್ರ ಮುಖಭಂಗ ಅನುಭವಿಸಿದರೂ RCB ಅಭಿಮಾನಿಗಳು ಮಾತ್ರ ತಂಡವನ್ನು ಕೈಬಿಡಲಿಲ್ಲ. ಇದೀಗ ಟೂರ್ನಿಯುದ್ದಕ್ಕೂ ತಂಡವನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಕೊಹ್ಲಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಗೆಲುವಿನೊಂದಿಗೆ 2019ರ IPL ಟೂರ್ನಿಗೆ ವಿದಾಯ ಹೇಳಿದ RCB
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವಿನ ಬಳಿಕ ಕೊಹ್ಲಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ಅಭಿಮಾನಿಗಳು, ತಂಡದ ಸದಸ್ಯರು, ಗ್ರೌಂಡ್ ಸ್ಟಾಫ್, ಸಪೂರ್ಟ್ ಸ್ಟಾಫ್ ಎಲ್ಲರಿಗೂ ತುಂಬು ಹೃದಯದ ಧನ್ಯವಾದ. ಮುಂದಿನ ವರ್ಷ ಬಲಿಷ್ಠವಾಗಿ ಮತ್ತೆ ಬರುತ್ತೇವೆ ಎಂದು ಇಂಗ್ಲೀಷ್‍ನಲ್ಲಿ ಟ್ವೀಟ್ ಮಾಡಿದದ ಕೊಹ್ಲಿ, ನೀವು ಇಲ್ಲಾಂದ್ರೆ, ನಾವು ಏನೂ ಅಲ್ಲಾ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕೊಹ್ಲಿ ಟ್ರೋಲ್ ಮಾಡಲು ಹೋಗಿ ತಾನೇ ಟ್ರೋಲ್ ಆದ ಖಲೀಲ್..!
ಸೋಲು ಗೆಲುವಿನಲ್ಲಿ ತಂಡದ ಜೊತೆಗಿದ್ದ ಅಭಿಮಾನಿಗಲ ಫೋಟೋ ಕೂಡ ಪೋಸ್ಟ್ ಮಾಡಿದ್ದಾರೆ. ಈ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಲೀಗ್ ಪಂದ್ಯದಲ್ಲಿ 5 ಗೆಲುವು ಹಾಗೂ 8 ಸೋಲಿನೊಂದಿಗೆ 11 ಅಂಕ ಸಂಪಾದಿಸಿತು. ಈ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.