ಐಪಿಎಲ್ ಟೂರ್ನಿ ಆರಂಭಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. RCB ಕೂಡ ಸಿದ್ದತೆ ನಡೆಸುತ್ತಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಹಿರಿಯ ಹಾಗೂ ಕಿರಿಯ ಕ್ರಿಕೆಟಿಗನ ವಿವರ ಇಲ್ಲಿದೆ.
ಬೆಂಗಳೂರು(ಮಾ.06): ಆಸ್ಟ್ರೇಲಿಯಾ ವಿರುದ್ದ ಏಕದಿನ ಸರಣಿ ಮುಗಿದ ಬೆನ್ನಲ್ಲೇ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ. ಮಾ.23 ರಿಂದ 12ನೇ ಆವೃತ್ತಿ ಶುರುವಾಗಲಿದೆ. 8 ತಂಡಗಳ ಮ್ಯಾನೇಜ್ಮೆಂಟ್ ಪ್ಲೇಯಿಂಗ್ ಇಲೆವೆನ್ ಆಯ್ಕೆ ಕಸರತ್ತು ನಡೆಸುತ್ತಿದೆ. ಇದರ ಬೆನ್ನಲ್ಲೇ ತಂಡದಲ್ಲಿರುವ ಅತ್ಯಂತ ಹಿರಿಯ ಹಾಗೂ ಕಿರಿಯ ಆಟಗಾರರ ವಿವರ ಇದೀಗ ಭಾರಿ ಚರ್ಚೆಯಾಗುತ್ತಿದೆ.
ಇದನ್ನೂ ಓದಿ: ಐಪಿಎಲ್ 2019ರ ವೇಳಾಪಟ್ಟಿ ಪ್ರಕಟ-ಉದ್ಘಾಟನಾ ಪಂದ್ಯದಲ್ಲಿ RCB -CSK ಫೈಟ್!
undefined
ಐಪಿಎಲ್ ಟೂರ್ನಿಯಲ್ಲಿರುವ ಹಿರಿಯ ಆಟಗಾರ ಅನ್ನೋ ಹೆಗ್ಗಳಿಕೆಗೆ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಪಾತ್ರರಾಗಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪ್ರಮುಖ ಆಟಗಾರ ಗೇಲ್ ವಯಸ್ಸು 39. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಹಿರಿಯ ಆಟಗಾರ ಅನ್ನೋ ಹೆಗ್ಗಳಿಕೆಗೆ ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್‌ಗೆ ಸಲ್ಲಲಿದೆ.
ಇದನ್ನೂ ಓದಿ: RCB ಸಹಾಯಕ ಕೋಚ್ ಆಗಿ ಜಮ್ಮು ಕಾಶ್ಮೀರ ಮಾಜಿ ಕ್ರಿಕೆಟಿಗ ನೇಮಕ!
RCB ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ವಯಸ್ಸು 35. ಆದರೆ ಈಗಲೂ ಅಷ್ಟೇ ಫಿಟ್ ಆಗಿದ್ದಾರೆ. ಫೀಲ್ಡಿಂಗ್‌ನಲ್ಲಿ ಎಬಿಡಿ ಯುವಕರನ್ನೇ ನಾಚಿಸುವಂತೆ ಫೀಲ್ಡಿಂಗ್ ಮಾಡಿದ್ದಾರೆ. ಇನ್ನು ತಂಡದಲ್ಲಿರುವ ಕಿರಿಯ ಕ್ರಿಕೆಟಿಗ ಪ್ರಯಾಸ್ ರೇ ಬರ್ಮನ್. ಈತನ ವಯಸ್ಸು ಕೇವಲ 16. ಪಶ್ಚಿಮ ಬಂಗಾಳದ ಸ್ಪಿನ್ನರ್ ಈ ಬಾರಿಯ ಐಪಿಎಲ್ ಹರಾಜಿನಲ್ಲಿ 1.5 ಕೋಟಿ ಮೊತ್ತಕ್ಕೆ ಆರ್‌ಸಿಬಿ ತಂಡದ ಪಾಲಾಗಿದ್ದಾರೆ.