
ಚೆನ್ನೈ(ಮಾ.12): 12ನೇ ಆವೃತ್ತಿ ಐಪಿಎಲ್ ಆರಂಭಕ್ಕೆ ಇನ್ನೆರಡು ವಾರ ಮಾತ್ರ ಬಾಕಿ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ವಿಡಿಯೋ ಬಿಡುಗಡೆ ಮಾಡಿದೆ. ತಂಡದ ಚಿನ್ನ ತಲಾ ಎಂದೇ ಗುರುತಿಸಿಕೊಂಡಿರುವ ಸುರೇಶ್ ರೈನಾ ಹಾಡಿರುವ ವಿಸಿಲ್ ಪೋಡು ಸಾಂಗ್ ಇದೀಗ ವೈರಲ್ ಆಗಿದೆ.
ಇದನ್ನೂ ಓದಿ: ಧೋನಿಯ ರೋರ್ ಆಫ್ ಲಯನ್ ಟ್ರೇಲರ್ ರಿಲೀಸ್
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆ್ಯಂಥಮ್ ಹಾಡಿಗೆ ರೈನಾ ಧನಿಗೂಡಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ಕ್ ಪೆರಿಯ ವಿಸಿಲ್ ಅಡಿಂಗ ಎಂದು ಹಾಡೋ ಮೂಲಕ ರೈನಾ, CSK ಅಭಿಮಾನಿಗಳಿಗೆ ರಸದೌತಣ ನೀಡಿದ್ದಾರೆ. ಶೀಘ್ರದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಆ್ಯಂಥಮ್ ಹಾಡನ್ನು ಬಿಡುಗಡೆ ಮಾಡಲಿದೆ.
ಇದನ್ನೂ ಓದಿ: ಅಮೇರಿಕಾದ ಕಾರಿನ ನಂಬರ್ ಪ್ಲೇಟ್ ಮೇಲೆ ಧೋನಿ ಹೆಸರು!
ಮಾರ್ಚ್ 23 ರಿಂದ 12ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.