
ಹೈದರಾಬಾದ್(ಮೇ.13): 12 ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ 2019ರ ಫೈನಲ್ ಪಂದ್ಯ ಅತ್ಯಂತ ರೋಚಕವಾಗಿತ್ತು. ಕೊನೆಯ ಎಸೆತದಲ್ಲಿ 1 ರನ್ ರೋಚಕ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್ 4ನೇ ಟ್ರೋಫಿ ಗೆದ್ದುಕೊಂಡಿತು. ಮುಂಬೈ ಇಂಡಿಯನ್ಸ್ ಗೆಲುವು ದಾಖಲಿಸುತ್ತಿದ್ದಂತೆ ಮೈದಾನದಲ್ಲಿ ಸಂಭ್ರಮ ಮುಗಿಲು ಮುಟ್ಟಿತ್ತು. ಪ್ರಶಸ್ತಿ ಸಮಾರಂಭದಲ್ಲಿ ಟ್ರೋಫಿ ಪಡೆದು ಮೈದಾನದಲ್ಲಿ ಸಂಭ್ರಮಾಚರಣೆ ನಡೆಸಿದರು. ಈ ಸಂಭ್ರಮದ ಬಳಿಕ ಮುಂಬೈ ಇಂಡಿಯನ್ಸ್ ಅದ್ಧೂರಿ ಪಾರ್ಟಿ ಆಯೋಜಿಸಿತ್ತು.
ಇದನ್ನೂ ಓದಿ: IPL 2019: ಚೆನ್ನೈಗೆ ಆಘಾತ- ಮುಂಬೈಗೆ ಚಾಂಪಿಯನ್ ಕಿರೀಟ
ಮುಂಬೈ ಇಂಡಿಯನ್ಸ್ ಟ್ರೋಫಿ ಪಾರ್ಟಿಯಲ್ಲಿ ಅಂಬಾನಿ ಬ್ರಿಗೇಡ್ ಸಂಭ್ರಮಾಚರಣೆ ನಡೆಸಿತು. ಈ ಪಾರ್ಟಿಯಲ್ಲಿ ರೋಹಿತ್ ಶರ್ಮಾ ಹಾಗೂ ಯುವರಾಜ್ ಸಿಂಗ್ ಡ್ಯಾನ್ಸ್ ವೈರಲ್ ಆಗಿದೆ. ಇವರಿಬ್ಬರ ರ್ಯಾಪ್ ಹಾಗೂ ಡ್ಯಾನ್ಸ್ ವಿಡೀಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
"
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.