
ಮುಂಬೈ(ಏ.07): ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 11ನೇ ಆವೃತ್ತಿಗೆ ಇಂದು ಸಂಜೆ 6.15ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ.
ಬಾಲಿವುಡ್ ತಾರೆಯರಾದ ಹೃತಿಕ್ ರೋಶನ್, ತಮನ್ಹಾ ಭಾಟಿಯಾ, ವರುಣ್ ಧವನ್ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಲಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಕಿಚ್ಚು ಹತ್ತಿಸಲಿದ್ದಾರೆ. ಸಂಜೆ 6.15ಕ್ಕೆ ಆರಂಭವಾಗಲಿರುವ ಕಾರ್ಯಕ್ರಮ ಸುಮಾರು 1 ತಾಸು ನಡೆಯಲಿದ್ದು, 7.15ಕ್ಕೆ ಮುಕ್ತಾಯಗೊಳ್ಳಲಿದೆ.
ಉದ್ಘಾಟನಾ ಸಮಾರಂಭದಲ್ಲಿ ರಣವೀರ್ ಸಿಂಗ್ ನೃತ್ಯ ಪ್ರದರ್ಶನ ನೀಡಲಿದ್ದಾರೆ ಎನ್ನಲಾಗಿತ್ತು. ಆದರೆ ಗಾಯದ ಸಮಸ್ಯೆಯಿಂದಾಗಿ 'ಖಿಲ್ಜಿ' ಖ್ಯಾತಿಯ ರಣವೀರ್ ಐಪಿಎಲ್'ನ ಉದ್ಘಾಟನಾ ಪಂದ್ಯದಲ್ಲಿ ಕಾರ್ಯಕ್ರಮ ನೀಡುತ್ತಿಲ್ಲ ಎನ್ನಲಾಗುತ್ತಿದೆ. ಉದ್ಘಾಟನಾ ಸಮಾರಂಭದಲ್ಲಿ ಕೇವಲ 2 ತಂಡಗಳ ನಾಯಕರಾದ ಎಂ. ಎಸ್.ಧೋನಿ ಹಾಗೂ ರೋಹಿತ್ ಶರ್ಮಾ ಪಾಲ್ಗೊಳ್ಳಲಿದ್ದಾರೆ. ಇನ್ನುಳಿದ ತಂಡಗಳ ಪರವಾಗಿ ಫ್ರಾಂಚೈಸಿಗಳು ಉಪಸ್ಥಿತರಿರಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.