2019ರ ವಿಶ್ವಕಪ್ ಟೂರ್ನಿಗೂ ಮುನ್ನ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ. ಹೀಗಾಗಿ ಐಪಿಎಲ್ ಸರಣಿಯಲ್ಲಿ ಅಬ್ಬರಿಸಿ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗೋ ಪ್ಲಾನ್ ಹಾಕಿಕೊಂಡಿರುವ ಕ್ರಿಕೆಟಿಗರಿಗೆ ನಾಯಕ ವಿರಾಟ್ ಕೊಹ್ಲಿ ಕಿವಿ ಮಾತು ಹೇಳಿದ್ದಾರೆ.
ಹೈದರಾಬಾದ್(ಮಾ.02): ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ತಂಡ ಇನ್ನು ಅಂತಿಮವಾಗಿಲ್ಲ. ಮಧ್ಯಮ ಕ್ರಮಾಂಕ ಸೇರಿದಂತೆ ಹಲವು ಸ್ಥಾನಗಳಿಗೆ ಆಟಗಾರರ ಪಟ್ಟಿ ಫೈನಲ್ ಆಗಿಲ್ಲ. ಇದರ ಬೆನ್ನಲ್ಲೇ ಐಪಿಎಲ್ ಟೂರ್ನಿ ಕೂಡ ಆರಂಭಗೊಳ್ಳಲಿದೆ. ಹೀಗಾಗಿ ಐಪಿಎಲ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡಿ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಲು ಬಯಸುವ ಕ್ರಿಕೆಟಿಗರಿಗೆ ನಾಯಕ ವಿರಾಟ್ ಕೊಹ್ಲಿ ಶಾಕ್ ನೀಡಿದ್ದಾರೆ.
ಇದನ್ನೂ ಓದಿ: ವಿಂಗ್ ಕಮಾಂಡರ್ ಅಭಿನಂದನ್ ಜರ್ಸಿ ಬಿಡುಗಡೆ ಮಾಡಿದ ಬಿಸಿಸಿಐ!
ಐಪಿಎಲ್ ಪ್ರದರ್ಶನವನ್ನು ವಿಶ್ವಕಪ್ ಟೂರ್ನಿ ಆಯ್ಕೆಗೆ ಪರಿಗಣಿಸುವುದಿಲ್ಲ ಎಂದು ವಿರಾಟ್ ಕೊಹ್ಲಿ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ಟೂರ್ನಿಗೂ ಮೊದಲೇ ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡವನ್ನ ಸಜ್ಜುಗೊಳಿಸಬೇಕಿದೆ ಎಂದಿದ್ದಾರೆ. ಈ ಮೂಲಕ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ವಿಶ್ವಕಪ್ ಟೂರ್ನಿ ಆಯ್ಕೆಗೆ ಅಂತಿಮ ಎಂದು ಕೊಹ್ಲಿ ಪರೋಕ್ಷವಾಗಿ ಹೇಳಿದ್ದಾರೆ.
ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ- ಸಂಭವನೀಯ ತಂಡ ಪ್ರಕಟ!
ಐಪಿಎಲ್ ಟೂರ್ನಿ ಪ್ರದರ್ಶನ, ವಿಶ್ವಕಪ್ ಆಯ್ಕೆ ಮೇಲೆ ಪರಿಣಾಮ ಬೀರುವುದಿಲ್ಲ. ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣಕ್ಕೆ ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಆಟಗಾರರನ್ನ ಕೈಬಿಡಲು ಸಾಧ್ಯವಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.