ಟೀಂ ಇಂಡಿಯಾ ಅನುಭವಿ ಆಲ್ರೌಂಡರ್ ಇದೀಗ ವಿದೀಶಿ ಚುಟುಕು ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಯಾರು ಆ ಕ್ರಿಕೆಟಿಗ..? ಯಾವ ಲೀಗ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...
ನವದೆಹಲಿ(ಮೇ.17): ಟೀಂ ಇಂಡಿಯಾ ಅನುಭವಿ ಆಲ್ರೌಂಡರ್ ಇರ್ಫಾನ್ ಪಠಾಣ್ ಇದೀಗ ಕೆರಿಬಿಯನ್ ಪ್ರೀಮಿಯರ್ ಲೀಗ್(CPL) ಆಡಲು ಸಜ್ಜಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಇರ್ಫಾನ್ ಪಠಾಣ್ ಅವರನ್ನು ಯಾವೊಬ್ಬ ಫ್ರಾಂಚೈಸಿಯೂ ಖರೀದಿಸಿರಲಿಲ್ಲ. 2017ರಲ್ಲಿ ಕಡೆಯ ಬಾರಿಗೆ ಇರ್ಫಾನ್ ಐಪಿಎಲ್ ಪಂದ್ಯಗಳನ್ನಾಡಿದ್ದರು.
ಇರ್ಫಾನ್ ಪಠಾಣ್ CPL ಕರಡುಪಟ್ಟಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿದ್ದಾರೆ. ಒಂದು ವೇಳೆ ಬಿಸಿಸಿಐ ಪಠಾಣ್'ಗೆ ನಿರಪೇಕ್ಷಣಾ ಪತ್ರ(NOC) ನೀಡಿದರೆ, ವಿದೇಶಿ ಟಿ20 ಟೂರ್ನಿಯಲ್ಲಿ ಪಾಲ್ಗೊಂಡ ಮೊದಲ ಕ್ರಿಕೆಟಿಗ ಎನ್ನುವ ಕೀರ್ತಿಗೆ ಎಡಗೈ ಮಧ್ಯಮವೇಗಿ ಪಾತ್ರರಾಗಲಿದ್ದಾರೆ.
undefined
ಇರ್ಫಾನ್ ಪಠಾಣ್ ಭಾರತ ಪರ 29 ಟೆಸ್ಟ್, 120 ಏಕದಿನ ಹಾಗೂ ಟಿ20 ಪಂದ್ಯಗಳನ್ನಾಡಿ 301 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ 2,800 ಅಂತರಾಷ್ಟ್ರೀಯ ರನ್ ಬಾರಿಸಿದ್ದಾರೆ.
ಬಿಸಿಸಿಐ ಈಗಾಗಲೇ ಬಿಗ್'ಬ್ಯಾಶ್ ಲೀಗ್, ಕೆರಿಬಿಯನ್ ಪ್ರೀಮಿಯರ್ ಲೀಗ್ ಮತ್ತು ಬಾಂಗ್ಲಾ ಪ್ರೀಮಿಯರ್ ಲೀಗ್'ನಂತಹ ವಿದೇಶಿ ಟೂರ್ನಿಗಳಲ್ಲಿ ಭಾರತೀಯ ಕ್ರಿಕೆಟಿಗರು ಪಾಲ್ಗೊಳ್ಳಲು ಅವಕಾಶ ನೀಡಿಲ್ಲ. ಹೀಗಾಗಿ ಪಠಾಣ್'ಗೆ ಬಿಸಿಸಿಐ ಗ್ರೀನ್ ಸಿಗ್ನಲ್ ನೀಡುತ್ತದೆಯೋ, ಇಲ್ಲವೋ ಎನ್ನುವುದನ್ನು ಕಾದು ನೋಡಬೇಕಿದೆ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.