ಗುಜರಾತ್ ಲಯನ್ಸ್ ತಂಡಕ್ಕೆ ಲಗ್ಗೆಯಿಟ್ಟ ಇರ್ಫಾನ್ ಪಠಾಣ್

Published : Apr 26, 2017, 10:37 AM ISTUpdated : Apr 11, 2018, 12:41 PM IST
ಗುಜರಾತ್ ಲಯನ್ಸ್ ತಂಡಕ್ಕೆ ಲಗ್ಗೆಯಿಟ್ಟ ಇರ್ಫಾನ್ ಪಠಾಣ್

ಸಾರಾಂಶ

ಗಾಯದಿಂದ ಚೇತರಿಸಿಕೊಳ್ಳದ ಕಾರಣ, ಐಪಿಎಲ್‌'ನಿಂದ ಹೊರಬಿದ್ದ ಡ್ವೇನ್‌ ಬ್ರಾವೋ ಬದಲಿಗೆ ಗುಜರಾತ್‌ ಲಯನ್ಸ್‌ ಇರ್ಫಾನ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ನವದೆಹಲಿ(ಏ.26): ಐಪಿಎಲ್‌ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಬಿಕರಿಯಾಗದೇ ಉಳಿದಿದ್ದ ಆಲ್ರೌಂಡರ್‌ ಇರ್ಫಾನ್‌ ಪಠಾಣ್‌, ಕೊನೆಗೂ 10ನೇ ಆವೃತ್ತಿಯ ಐಪಿಎಲ್‌'ನಲ್ಲಿ ಗುಜರಾತ್ ಲಯನ್ಸ್ ಪರ ಆಡುವ  ಅವಕಾಶ ಪಡೆದುಕೊಂಡಿದ್ದಾರೆ.

ಗಾಯದಿಂದ ಚೇತರಿಸಿಕೊಳ್ಳದ ಕಾರಣ, ಐಪಿಎಲ್‌'ನಿಂದ ಹೊರಬಿದ್ದ ಡ್ವೇನ್‌ ಬ್ರಾವೋ ಬದಲಿಗೆ ಗುಜರಾತ್‌ ಲಯನ್ಸ್‌ ಇರ್ಫಾನ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. 50 ಲಕ್ಷ ರೂಪಾಯಿ ಮುಖಬೆಲೆ ಹೊಂದಿದ್ದ ಪಠಾಣ್‌ ಅವರನ್ನು ಹರಾಜಿನಲ್ಲಿ ಯಾವ ಫ್ರಾಂಚೈಸಿಯೂ ಖರೀದಿಸುವ ಆಸಕ್ತಿ ತೋರಿರಲಿಲ್ಲ.

ಕಳೆದ 9 ವರ್ಷಗಳಲ್ಲಿ ಕಿಂಗ್ಸ್‌ ಇಲೆವೆನ್‌, ಡೆಲ್ಲಿ ಡೇರ್‌ಡೆವಿಲ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್‌, ಸನ್‌'ರೈಸರ್ಸ್ ಹೈದರಾಬಾದ್‌ ಹಾಗೂ ಪುಣೆ ಸೂಪರ್‌'ಜೈಂಟ್‌ ತಂಡಗಳನ್ನು ಪ್ರತಿನಿಧಿಸಿದ್ದರು. 102 ಐಪಿಎಲ್‌ ಪಂದ್ಯಗಳನ್ನು ಆಡಿರುವ ಅವರು, 1137 ರನ್‌ ಹಾಗೂ 80 ವಿಕೆಟ್‌ ಕಬಳಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?