ಭಜ್ಜಿ to ಬುಮ್ರಾ; 3 ಭಾರತೀಯರ ಹ್ಯಾಟ್ರಿಕ್ ವಿಕೆಟ್ ವಿಡಿಯೋ!

By Web Desk  |  First Published Sep 1, 2019, 5:57 PM IST

ವೆಸ್ಟ್ ಇಂಡೀಸ್ ವಿರುದ್ದ ಜಸ್ಪ್ರೀತ್ ಬುಮ್ರ್ ಹ್ಯಾಟ್ರಿಕ್ ವಿಕೆಟ್ ಕಬಳಿಸೋ ಮೂಲಕ ದಾಖಲೆ ಬರೆದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ 3ನೇ ಬೌಲರ್ ಅನ್ನೋ ಖ್ಯಾತಿಗೂ ಪಾತ್ರರಾಗಿದ್ದಾರೆ. ಹ್ಯಾಟ್ರಿಕ್ ವಿಕೆಟ್ ಪಡೆದ ಭಾರತದ ಮೂವರು  ಬೌಲರ್ಸ್ ಹಾಗೂ ಹ್ಯಾಟ್ರಿಕ್ ವಿಕೆಟ್ ವಿಡಿಯೋ ಇಲ್ಲಿದೆ.
 


ಕಿಂಗ್ಸ್‌ಸ್ಟನ್(ಸೆ.01): ವೆಸ್ಟ್ ಇಂಡೀಸ್ ವಿರುದ್ದದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಬುಮ್ರಾ ಅದ್ಬುತ ದಾಳಿಯಿಂದ ವಿಂಡೀಸ್ ನಲುಗಿ ಹೋಗಿದ್ದು, ಇದೀಗ 2ನೇ ಟೆಸ್ಟ್ ಪಂದ್ಯದಲ್ಲೂ ಭಾರತ ಗೆಲುವಿನತ್ತ ಹೆಜ್ಜೆ ಇಟ್ಟಿದೆ. ಬುಮ್ರಾ ಹ್ಯಾಟ್ರಿಕ್ ವಿಕೆಟ್ ಪಡೆಯೋ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ 3ನೇ ಬೌಲರ್ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

ಇದನ್ನೂ ಓದಿ: ಬುಮ್ರಾ ಹ್ಯಾಟ್ರಿಕ್ ಮ್ಯಾಜಿಕ್: ಹರಿದು ಬಂತು ಅಭಿನಂದನೆಗಳ ಮಹಾಪೂರ

Latest Videos

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್ ಹಾಗೂ ಜಸ್ಪ್ರೀತ್ ಬುಮ್ರಾ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. ಮೂವರು ಹ್ಯಾಟ್ರಿಕ್ ಸಾಧಕರ ವಿಡಿಯೋ ಇಲ್ಲಿದೆ.

ಪಾಕಿಸ್ತಾನ ಪ್ರವಾಸದಲ್ಲಿದ್ದ ಭಾರತ ಜನವರಿ 29, 2006ರಲ್ಲಿ ಭಾರತದ ವೇಗಿ ಇರ್ಫಾನ್ ಪಠಾಣ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಇತಿಹಾಸ ರಚಿಸಿದ್ದರು. ಮೊದಲ ಓವರ್‌ನಲ್ಲೇ ಪಠಾಣ್ ಈ ಸಾಧನೆ ಮಾಡಿದ್ದರು. 

 

ಮಾರ್ಚ್ 11, 2001 ರಲ್ಲಿ ಆಸ್ಟ್ರೇಲಿಯಾ ವಿರುದ್ದ  ಕೋಲ್ಕತಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಹರ್ಭಜನ್ ಸಿಂಗ್  ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು. 

ಆಗಸ್ಟ್ 31, 2019ರಲ್ಲಿ ವೆಸ್ಟ್ ಇಂಡೀಸ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದರು.
 

click me!