ಹರ್ ಭಜನ್ ಸಿಂಗ್ ಕಾಂಗ್ರೆಸ್ ಗೆ?

Published : Dec 23, 2016, 05:12 AM ISTUpdated : Apr 11, 2018, 12:58 PM IST
ಹರ್ ಭಜನ್ ಸಿಂಗ್ ಕಾಂಗ್ರೆಸ್ ಗೆ?

ಸಾರಾಂಶ

ಟೀಂ ಇಂಡಿಯಾದ ಆಫ್ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌  ಹೊಸ ಇನ್ನಿಂಗ್ಸ್‌ ಆರಂಭಿಸಲು ಸಜ್ಜಾಗಿದ್ದಾರೆ. ಮುಂಬರಲಿರುವ ಪಂಜಾಬ್‌ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಅಂತ ಹೇಳಲಾಗಿದೆ.

ನವದೆಹಲಿ (ಡಿ. 23): ಟೀಂ ಇಂಡಿಯಾದ ಆಫ್ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌  ಹೊಸ ಇನ್ನಿಂಗ್ಸ್‌ ಆರಂಭಿಸಲು ಸಜ್ಜಾಗಿದ್ದಾರೆ. ಮುಂಬರಲಿರುವ ಪಂಜಾಬ್‌ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಅಂತ ಹೇಳಲಾಗಿದೆ. ಈಗಾಗಲೇ ಹರ್ಭಜನ್‌ ಅವರು ಕಾಂಗ್ರೆಸ್‌ ನಾಯಕರ ಸಂಪರ್ಕದಲ್ಲಿದ್ದು , ಜಲಂಧರ್‌ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಹುರಿಯಾಳಾಗಿ ಕಣಕ್ಕಿಳಿಯುವ ಬಗ್ಗೆ ಚರ್ಚೆ ನಡೆಸಿದ್ದಾರಂತೆ.

ಇತ್ತೀಚೆಗೆ ಬಿಜೆಪಿ ತೊರೆದಿದ್ದ ಮಾಜಿ ಕ್ರಿಕೆಟಿಗ ನವ್‌ಜೋತ್‌ ಸಿಂಗ್‌ ಸಿಧು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಅಮೃತಸರ ಪೂರ್ವ ವಿಧಾನ ಸಭಾ ಕ್ಷೇತ್ರದಿಂದ ಅವರಿಗೆ ಟಿಕೇಟ್‌ ನೀಡಲು ಕಾಂಗ್ರೆಸ್‌ ನಿರ್ಧರಿಸಿದೆ. ಈ ಬೆನ್ನಲ್ಲೇ ಹರ್ಭಜನ್ ಕೂಡ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಅಂತ ಮೂಲಗಳು ತಿಳಿಸಿವೆ..

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್‌!
ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!