
ಬೆಂಗಳೂರು(ಮೇ.15): ಟೀಂ ಇಂಡಿಯಾದ ಹಿರಿಯ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಪ್ರಸಕ್ತ ಐಪಿಎಲ್'ನಲ್ಲಿ ಒಂದೂ ವಿಕೆಟ್ ಪಡೆಯದೇ ತನ್ನ ಅಭಿಯಾನ ಮುಗಿಸಿದ್ದಾರೆ.
ಫೆಬ್ರವರಿಯಲ್ಲಿ ನಡೆದ ಐಪಿಎಲ್ ಹರಾಜಿನ ವೇಳೆ ತನ್ನ ಮೂಲ ಬೆಲೆ 2 ಕೋಟಿ ರೂಪಾಯಿ ಇದ್ದರೂ ಯಾವೊಬ್ಬ ಪ್ರಾಂಚೈಸಿಯೂ ಇಶಾಂತ್ ಅವರನ್ನು ಖರೀಧಿಸಲು ಮುಂದೆ ಬಂದಿರಲಿಲ್ಲ. ಆದರೆ ಟೂರ್ನಿಯ ಮಧ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ತನ್ನ ಬೌಲಿಂಗ್ ವಿಭಾಗವನ್ನು ಬಲಪಡಿಸುವ ಉದ್ದೇಶದಿಂದ ಡೆಲ್ಲಿ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.
ಲೀಗ್ ಹಂತದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಪರ ಒಟ್ಟು ಆರು ಪಂದ್ಯಗಳನ್ನಾಡಿದ ಇಶಾಂತ್ ಶರ್ಮಾ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.