
ಮಾಸ್ಕೋ(ಜು.15): ಕ್ರೊವೇಷಿಯಾ ತಂಡ ಗೆಲ್ಲಲಿ ಎಂಬ ಅಭಿಮಾನಿಗಳ ಪ್ರಾರ್ಥನೆ ಜೋರಾಗಿದೆ. ಅಭಿಮಾನಿಗಳ ಜೊತೆಗೆ ಇದೀಗ ಕ್ರೊವೇಷಿಯಾ ತಂಡ ಕೂಡ ಗೆಲುವಿಗಾಗಿ ಎಲ್ಲಾ ತಯಾರಿ ಮಾಡಿಕೊಂಡಿದೆ. ಇಷ್ಟೇ ಅಲ್ಲ ಕ್ರೊವೇಷಿಯಾ ತಂಡ ಈ ಬಾರಿ ಫಿಫಾ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದರೆ, ಹಣೆ ಮೇಲೆ ಟ್ಯಾಟು ಹಾಕಿಸಿಕೊಳ್ಳುತ್ತೇನೆ ಎಂದು ಕ್ರೊವೇಷಿಯಾದ ಮಿಡ್‌ಫೀಲ್ಡರ್ ಇವಾನ್ ರಕಿಟಿಚ್ ಹೇಳಿದ್ದಾರೆ.
ಹಣೆ ಮೇಲೆ ವಿಶ್ವಕಪ್ ಚಾಂಪಿಯನ್ಸ್-2018 ಎಂದು ಟ್ಯಾಟು ಹಾಕಿಸಿಕೊಳ್ಳುತ್ತೇನೆ ಎಂದಿರು ಇವಾನ್, ಗೆಲುವಿಗಾಗಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನುಮಣಿಸಿದ ಕ್ರೊವೇಷಿಯಾ ಫಿಫಾ ವಿಶ್ವಕಪ್ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಚೊಚ್ಚಲ ಪ್ರಶಸ್ತಿಯ ಕನಸು ಕಾಣುತ್ತಿದೆ.
‘ನನ್ನ ಹಣೆ ಖಾಲಿ ಇದೆ. ವಿಶ್ವಕಪ್ ಫೈನಲ್ ಗೆದ್ದರೆ ಟ್ಯಾಟು ಹಾಕಿಸಿಕೊಳ್ಳುತ್ತೇನೆ. ದೇವರ ದಯೆಯಿಂದ ನಾವು ವಿಶ್ವಕಪ್ ಗೆಲ್ಲಬೇಕಷ್ಟೆ. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ನನ್ನ ಹೆಂಡತಿಯ ಅನುಮತಿ ಕೇಳಬೇಕಿದೆ’ ಎಂದು ರಕಿಟಿಚ್ ತಮಾಷೆ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.