ಪುಲ್ವಾಮ ದಾಳಿ : ಉಗ್ರರ ಕೃತ್ಯ ಖಂಡಿಸಿದ ಸೆಹ್ವಾಗ್-ಗಂಭೀರ್!

Published : Feb 14, 2019, 08:42 PM IST
ಪುಲ್ವಾಮ ದಾಳಿ : ಉಗ್ರರ ಕೃತ್ಯ ಖಂಡಿಸಿದ ಸೆಹ್ವಾಗ್-ಗಂಭೀರ್!

ಸಾರಾಂಶ

ಜಮ್ಮು ಮತ್ತು ಕಾಶ್ಮೀರದಲ್ಲಿ  ಉಗ್ರರ ದಾಳಿಯಿಂದ 40 ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ(ಫೆ.14): ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪುಲ್ವಾಮ ಜಿಲ್ಲೆಯ ಅನಂತ್‌ಪುರ್‌ನಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿದ್ದಾರೆ. ಉಗ್ರರ ಕೃತ್ಯದಿಂದ 40 CRPF ಯೋಧರು ಹುತಾತ್ಮರಾಗಿದ್ದಾರೆ. ಘಟನೆಯನ್ನ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಉಗ್ರವಾಗಿ ಖಂಡಿಸಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್ ಖಡಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರ ಮೇಲಿನ ದಾಳಿ ಸುದ್ದಿ ಅತ್ಯಂತ ನೋವು ತರಿಸಿದೆ. ನೋವನ್ನ ಹೇಳಲು ಪದಗಳು ಸಾಲುತ್ತಿಲ್ಲ. ಗಾಯಗೊಂಡಿರುವ ಯೋಧರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

 

 

ಪ್ರತ್ಯೇಕವಾದಿಗಳ ಜೊತೆ ಮಾತುಕತೆ, ಪಾಕಿಸ್ತಾನದ ಜೊತೆ ಮಾತುಕತೆ ಇನ್ನು ಸಾಕು. ನಮ್ಮ ಉತ್ತರ ರಣರಂಗದಲ್ಲಿ ಆಗಬೇಕು.  ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರ ನೋವು ಸಹಿಸಲು ಆಗುತ್ತಿಲ್ಲ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!