2ನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ

Published : Jul 03, 2022, 10:34 AM IST
2ನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಗೆದ್ದುಸರಣಿಯಲ್ಲಿ ಮುನ್ನಡೆ  ಸಾಧಿಸಿರುವ ಭಾರತ ತಂಡ, ಇದೀಗ 2ನೇ ಟಿ20 ಪಂದ್ಯಕ್ಕೆ ರೆಡಿಯಾಗಿದೆ. ಪಂದ್ಯ ಆರಂಭಕ್ಕೂ ಮೊದಲೇ ಇಂಡಿಯಾಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅದೇನು? ಇಲ್ಲಿದೆ ನೋಡಿ.

ಲಂಡನ್‌(ಜು.06): ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾ ಆಘಾತ ಎದುರಾಗಿದೆ. ಹೆಬ್ಬೆರಳು ಗಾಯದಿಂದ ಇಂಗ್ಲೆಂಡ್ ವಿರುದ್ದದ ಟಿ20 ಟೂರ್ನಿಯಿಂದ ಹೊರಗುಳಿದಿದ್ದ ವೇಗಿ ಜಸ್‌ಪ್ರೀತ್ ಬುಮ್ರಾ, ಇದೀಗ ಏಕದಿನ ಸರಣಿಗೂ ಅಲಭ್ಯರಾಗಿದ್ದಾರೆ.

ಜಸ್‌ಪ್ರೀತ್ ಬುಮ್ರಾ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ ಎಂದು ತಂಡದ ಮೂಲಗಳು ತಿಳಿಸಿವೆ. ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಬುಮ್ರಾಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ 3 ಟಿ20 ಪಂದ್ಯದ ಬಳಿಕ ಜುಲೈ 12 ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ. ಇನ್ನೊಂದು ವಾರದಲ್ಲಿ ಬುಮ್ರಾ ಸಂಪೂರ್ಣ ಚೇತರಿಸಿಕೊಳ್ಳೋದು ಅನುಮಾನ ಎನ್ನಲಾಗುತ್ತಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಡರ್ 19 ಏಷ್ಯಾಕಪ್‌ ಭಾರತ-ಶ್ರೀಲಂಕಾ ಸೆಮಿಫೈನಲ್ ರದ್ದಾದ್ರೆ ಫೈನಲ್‌ಗೇರೋದು ಯಾರು?
ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಜಾರ್ಖಂಡ್‌ಗೆ ಚೊಚ್ಚಲ ಕಿರೀಟ, ಶತಕ ಚಚ್ಚಿ ಅಪರೂಪದ ದಾಖಲೆ ಬರೆದ ಇಶಾನ್ ಕಿಶನ್!