12ನೇ ಆವೃತ್ತಿಯ ಐಪಿಎಲ್‌ಗೆ ಸ್ಟಾರ್ ಕ್ರಿಕೆಟಿಗ ಗುಡ್ ಬೈ..!

Published : Apr 21, 2019, 11:45 AM ISTUpdated : Apr 21, 2019, 11:56 AM IST
12ನೇ ಆವೃತ್ತಿಯ ಐಪಿಎಲ್‌ಗೆ ಸ್ಟಾರ್ ಕ್ರಿಕೆಟಿಗ ಗುಡ್ ಬೈ..!

ಸಾರಾಂಶ

ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಕ್ರಿಕೆಟಿಗ 12ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಗುಡ್ ಬೈ ಹೇಳಿದ್ದಾರೆ. ವೈಯುಕ್ತಿಕ ಕಾರಣದಿಂದಾಗಿ ಬಟ್ಲರ್ ಇಂಗ್ಲೆಂಡ್’ಗೆ ತೆರಳಿದ್ದಾರೆ ಎನ್ನಲಾಗಿದೆ...

ಜೈಪುರ: ರಾಜಸ್ಥಾನ ರಾಯಲ್ಸ್‌ಗೆ 12ನೇ ಆವೃತ್ತಿಯ ಐಪಿಎಲ್‌ನ ಇನ್ನುಳಿದ ಪಂದ್ಯಗಳಲ್ಲಿ ಜೋಸ್‌ ಬಟ್ಲರ್‌ ಸೇವೆ ಲಭ್ಯವಾಗುವುದಿಲ್ಲ. ನಿರೀಕ್ಷೆಗೂ ಮೊದಲೇ ಅವರ ಪತ್ನಿ ಲೂಸಿ ಮಗುವಿಗೆ ಜನ್ಮ ನೀಡಿದ ಕಾರಣ, ಬಟ್ಲರ್‌ ಇಂಗ್ಲೆಂಡ್‌ಗೆ ತೆರಳಿದ್ದಾರೆ. ಅವರು ಐಪಿಎಲ್‌ಗೆ ವಾಪಸಾಗುವುದಿಲ್ಲ ಎಂದು ತಿಳಿದುಬಂದಿದೆ. 

ವಿಶ್ವಕಪ್ ಟೂರ್ನಿಗೆ ಆತಿಥೇಯ ಇಂಗ್ಲೆಂಡ್ ತಂಡ ಪ್ರಕಟ!

ರಾಯಲ್ಸ್‌ ಪರ ಅತ್ಯುತ್ತಮ ಪ್ರದರ್ಶನ ತೋರಿದ ಬಟ್ಲರ್‌ಗೆ ಇಂಗ್ಲೆಂಡ್‌ ವಿಶ್ವಕಪ್‌ ಪ್ರಾಥಮಿಕ ತಂಡದಲ್ಲಿ ಸ್ಥಾನ ಸಿಕ್ಕಿದೆ. 15 ಸದಸ್ಯರ ತಂಡದಲ್ಲೂ ಬಟ್ಲರ್‌ ಸ್ಥಾನ ಪಡೆಯುವುದು ಬಹುತೇಕ ಖಚಿತ. ಅವರು ಈ ತಿಂಗಳಾಂತ್ಯಕ್ಕೆ ಇಂಗ್ಲೆಂಡ್‌ಗೆ ತೆರಳಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಕೆಲ ದಿನಗಳು ಮುಂಚಿತವಾಗಿಯೇ ಐಪಿಎಲ್‌ಗೆ ಗುಡ್‌ಬೈ ಹೇಳಿದ್ದಾರೆ.

ಮುಂಬೈಗೆ ಮಣ್ಣು ಮುಕ್ಕಿಸಿದ ರಾಜಸ್ಥಾನ

ರಾಜಸ್ಥಾನ ರಾಯಲ್ಸ್ ತಂಡದ ಬಟ್ಲರ್ ಆಡಿದ 8 ಇನ್ನಿಂಗ್ಸ್’ಗಳಲ್ಲಿ 3 ಅರ್ಧಶತಕ ಸಹಿತ 311 ರನ್ ಬಾರಿಸಿದ್ದರು. ಇನ್ನು ಮುಂಬೈ ವಿರುದ್ಧ ವಾಂಖೇಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಟ್ಲರ್ ಕೇವಲ 43 ಎಸೆತಗಳಲ್ಲಿ 89 ರನ್ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ರಾಜಸ್ಥಾನ ರಾಜಸ್ಥಾನ ತಂಡಕ್ಕೆ ನೂತನ ನಾಯಕ ನೇಮುಕವಾಗಿದ್ದು ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ಮೊದಲು ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುತ್ತಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನೆಲ್ ಮೆಸ್ಸಿ ನೋಡಲಾಗದೇ ರೊಚ್ಚಿಗೆದ್ದ ಕೋಲ್ಕತಾ! ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಪೊಲೀಸರಿಂದ ಲಾಠಿಚಾರ್ಜ್
ಮೆಸ್ಸಿ ಭೇಟಿ ವೇಳೆ ಕೋಲ್ಕತಾದಲ್ಲಿ ರಾದ್ಧಾಂತ: ಆಟಗಾರನ ಕಣ್ತುಂಬಿಕೊಳ್ಳಲು ಆಗದ್ದಕ್ಕೆ ಅಭಿಮಾನಿಗಳ ಆಕ್ರೋಶ