ಕಬಡ್ಡಿಗೆ ಅನೂಪ್ ಕುಮಾರ್ ವಿದಾಯ

Published : Dec 20, 2018, 12:20 PM IST
ಕಬಡ್ಡಿಗೆ ಅನೂಪ್ ಕುಮಾರ್ ವಿದಾಯ

ಸಾರಾಂಶ

2006ರಲ್ಲಿ ಅನೂಪ್ ಅಂತರಾಷ್ಟ್ರೀಯ ಕಬಡ್ಡಿಗೆ ಪದಾರ್ಪಣೆ ಮಾಡಿದ್ದ ಅವರ, 2014ರ ಏಷ್ಯನ್ ಗೇಮ್ಸ್, 2016ರ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ಭಾರತ ತಂಡದ ನಾಯಕರಾಗಿದ್ದರು.

ಪಂಚಕುಲಾ[ಡಿ.20] ದಿಗ್ಗಜ ಆಟಗಾರ ಅನೂಪ್ ಕುಮಾರ್, ಕಬಡ್ಡಿಗೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ 15 ವರ್ಷಗಳ ಕಬಡ್ಡಿ ವೃತ್ತಿಜೀವನಕ್ಕೆ ಗುಡ್’ಬೈ ಹೇಳಿದ್ದಾರೆ. ಬುಧವಾರ ಪಂಚಕುಲಾದಲ್ಲಿ ತಮ್ಮ ನಿವೃತ್ತಿ ವಿಚಾರ ಬಹಿರಂಗಪಡಿಸಿದ್ದಾರೆ. 2010, 2014ರಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದಲ್ಲಿ ಅನೂಪ್ ಇದ್ದರು. 

2006ರಲ್ಲಿ ಅನೂಪ್ ಅಂತರಾಷ್ಟ್ರೀಯ ಕಬಡ್ಡಿಗೆ ಪದಾರ್ಪಣೆ ಮಾಡಿದ್ದ ಅವರ, 2014ರ ಏಷ್ಯನ್ ಗೇಮ್ಸ್, 2016ರ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ಭಾರತ ತಂಡದ ನಾಯಕರಾಗಿದ್ದರು. ಅನೂಪ್‌ರನ್ನು 2018ರ ಏಷ್ಯನ್ ಗೇಮ್ಸ್ ತಂಡದಿಂದ ಹೊರಗಿಡಲಾಗಿತ್ತು. ಮೊದಲ ಆವೃತ್ತಿಯಿಂದಲೂ ಯು ಮುಂಬಾ ಪರ ಪ್ರೊ ಕಬಡ್ಡಿಯಲ್ಲಿ ಆಡುತ್ತಿದ್ದ ಅನೂಪ್, 2ನೇ ಆವೃತ್ತಿಯಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 

05ನೇ ಆವೃತ್ತಿಯ ವೇಳೆ ಯು ಮುಂಬಾ ತಂಡವನ್ನು ಪ್ರತಿನಿಧಿಸುತ್ತಿದ್ದ ಅನೂಪ್ ಕುಮಾರ್ ತಮ್ಮ ವೈಯುಕ್ತಿಕ ಹಾಗೂ ವೃತ್ತಿಬದುಕಿನ ಬಗ್ಗೆ ಮನಬಿಚ್ಚಿ ಮಾತನಾಡಿದ್ದರು.  

ಫಿಟ್ನೆಸ್ ಹಾಗೂ ಲಯದ ಸಮಸ್ಯೆಯಿಂದಾಗಿ ಈ ವರ್ಷ ಯು ಮುಂಬಾ ಅವರನ್ನು ಕೈ ಬಿಟ್ಟಿತ್ತು. ಕೇವಲ 30 ಲಕ್ಷ ರು.ಗೆ ಜೈಪುರ ತಂಡ ಖರೀದಿಸಿತ್ತು. ವೈಯಕ್ತಿಕ ಕಾರಣಗಳಿಂದ ಅನೂಪ್ ಈ ಬಾರಿಯ ಪ್ರೊ ಕಬಡ್ಡಿಯಲ್ಲಿ ಹೆಚ್ಚಿನ ಪಂದ್ಯ ಆಡಿರಲಿಲ್ಲ. 2012ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದ ಅನೂಪ್, ಹರ್ಯಾಣ ಪೊಲೀಸ್ ಇಲಾಖೆಯಲ್ಲಿ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!
U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!