ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಹ್ವಾನ ತಿರಸ್ಕರಿಸಿದ ಕಪಿಲ್ ದೇವ್

By Web DeskFirst Published Aug 14, 2018, 7:52 PM IST
Highlights

ಪಾಕಿಸ್ತಾನ ನೂತನ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ. ಅದ್ಧೂರಿ ಸಮಾರಂಭಕ್ಕೆ ಟೀಂ  ಇಂಡಿಯಾ ಮಾಜಿ ಕ್ರಿಕೆಟರಿಗೆ ಇಮ್ರಾನ್ ಖಾನ್ ಆಹ್ವಾನ ನೀಡಿದ್ದಾರೆ. ಆದರೆ ಸುನಿಲ್ ಗವಾಸ್ಕರ್ ಬಳಿಕ ಇದೀಗ ಕಪಿಲ್ ದೇವ್ ಕೂಡ ಆಹ್ವಾನ ತಿರಸ್ಕರಿಸಿದ್ದಾರೆ.

ನವದೆಹಲಿ(ಆ.14): ಪಾಕಿಸ್ತಾನ ನೂತನ ಪ್ರಧಾನಿಯಾಗಿ ಮಾಜಿ ನಾಯಕ ಇಮ್ರಾನ್ ಖಾನ್ ಆಗಸ್ಟ್ 18 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದ್ಧೂರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕ್ರಿಕೆಟಿಗರನ್ನೂ ಇಮ್ರಾನ್ ಖಾನ್ ಆಹ್ವಾನಿಸಿದ್ದಾರೆ. 

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಬಳಿಕ ಇದೀಗ ಮಾಜಿ ನಾಯಕ ಕಪಿಲ್ ದೇವ್ ಕೂಡ ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.

ವೈಯುಕ್ತಿ ಕಾರಣಗಳಿಂದ ಪಾಕಿಸ್ತಾನ ಪ್ರಧಾನಿ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಕಪಿಲ್ ದೇವ್ ಹೇಳಿದ್ದಾರೆ. ಇನ್ನು ಗವಾಸ್ಕರ್ ಕೂಡ ಇತರ ಕಾರ್ಯಕ್ರಮಗಳಿಂದಾಗಿ ಪಾಕಿಸ್ತಾನಕ್ಕೆ ತೆರಳುತ್ತಿಲ್ಲ. 

ಭಾರತ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ಧು, ಇಮ್ರಾನ್ ಖಾನ್ ಆಹ್ವಾನ ಸ್ವೀಕರಿಸಿದ್ದಾರೆ. ಇಷ್ಟೇ ಅಲ್ಲ ಪಾಕಿಸ್ತಾನಕ್ಕೆ ತೆರಳಲು ವೀಸಾ ಕೂಡ ಲಭ್ಯವಾಗಿದೆ. ಸಿದ್ದು ನಿರ್ಧಾರವನ್ನ ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ ಟೀಕಿಸಿದ್ದಾರೆ.

click me!