
ಬೆಂಗಳೂರು(ಆ.12): ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರ್ನಾಟದಲ್ಲಿನ ಭೀಕರ ಮಳೆ ಹಾಗೂ ಪ್ರವಾಹದಿಂದ ಅನಿವಾರ್ಯವಾಗಿ ರಾಜ್ಯ ಕ್ರಿಕೆಟ್ ಸಂಸ್ಥೆ ಕೆಪಿಎಲ್ ಟೂರ್ನಿಯ ಕ್ರೀಡಾಂಗಣಗಳನ್ನು ಬದಲಾಯಿಸಿದೆ. ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಿಂದ ಕ್ರೀಡಾಂಗಣ ನೀರಿನಿಂದ ತುಂಬಿ ಹೋಗಿದೆ ಹೀಗಾಗಿ ಹುಬ್ಳಳ್ಳಿ ಪಂದ್ಯಗಳನ್ನು ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಪ್ರವಾಹ ಸಂತ್ರಸ್ತರ ನೆರವಿಗೆ KPL ಕ್ರಿಕೆಟ್!
ಹುಬ್ಬಳ್ಳಿ ಪಂದ್ಯಗಳು, ಬೆಂಗಳೂರು ಹಾಗೂ ಮೈಸೂರಿಗೆ ಶಿಫ್ಟ್ ಮಾಡಲಾಗಿದೆ. ನೂತನ ವೇಳಾಪಟ್ಟಿ ಪ್ರಕಾರ ಕೆಪಿಎಲ್ ಟೂರ್ನಿಯ ಮೊದಲ ಚರಣ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಆಗಸ್ಟ್ 16 ರಿಂದ 23ರ ವರೆಗೆ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಇನ್ನುಳಿದ ಪಂದ್ಯಗಳು ಆಗಸ್ಟ್ 25 ರಿಂದ 31ರ ವರೆಗೆ ಮೈಸೂರಿನಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: KPL 2019: ಇಲ್ಲಿದೆ ಆಟಗಾರರ ಹರಾಜಿನ ಸಂಪೂರ್ಣ ಲಿಸ್ಟ್ !
ಬೆಂಗಳೂರಿನಲ್ಲಿ 15 ಕೆಪಿಎಲ್ ಪಂದ್ಯಗಳನ್ನು ಆಯೋಜಿಸಿದರೆ, ಮೈಸೂರು 10 ಪಂದ್ಯಕ್ಕೆ ಆತಿಥ್ಯವಹಿಸಲಿದೆ. 8ನೇ ಆವೃತ್ತಿ ಕೆಪಿಎಲ್ ಟೂರ್ನಿಗೆ ಎಲ್ಲಾ ತಯಾರಿ ಮಾಡಿಕೊಂಡಿರುವ KSCA, ಇದೀಗ ಟ್ರೋಫಿ ಅನಾವರಣಕ್ಕೆ ಸಜ್ಜಾಗಿದೆ.
KPL ಟೂರ್ನಿ ಸಂಪೂರ್ಣ ವೇಳಾಪಟ್ಟಿ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.