
ಬೆಂಗಳೂರು(ಡಿ.13): ಇದೇ ಡಿ. 17ರಿಂದ 21ರ ವರೆಗೆ ಕೋಲ್ಕತಾದಲ್ಲಿ ನಡೆಯಲಿರುವ ವಿದರ್ಭ ವಿರುದ್ಧದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕಾಗಿ 16 ಆಟಗಾರರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.
ಕ್ವಾರ್ಟರ್'ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿದ್ದ ತಂಡವನ್ನೇ ಉಳಿಸಿಕೊಳ್ಳಲಾಗಿದೆ. ಆದರೆ ಅಂತಿಮ 11ರ ಬಳಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಬಲಿಷ್ಠ ಮುಂಬೈ ತಂಡವನ್ನು ಇನಿಂಗ್ಸ್ ಹಾಗೂ 20 ರನ್ ಅಂತರದಲ್ಲಿ ಮಣಿಸಿರುವ ವಿನಯ್ ಪಡೆ ಪ್ರಶಸ್ತಿಗೆ ಮುತ್ತಿಕ್ಕಲು ಇನ್ನೆರಡು ಸವಾಲುಗಳನ್ನು ಮೆಟ್ಟಿ ನಿಲ್ಲಬೇಕಿದೆ
ತಂಡ: ವಿನಯ್ ಕುಮಾರ್ (ನಾಯಕ), ಕರುಣ್ ನಾಯರ್, ಮಯಾಂಕ್ ಅಗರ್'ವಾಲ್, ಸಮರ್ಥ್ ಆರ್, ನಿಶ್ಚಲ್ ಡಿ, ಸ್ಟುವರ್ಟ್ ಬಿನ್ನಿ, ಸಿ.ಎಂ. ಗೌತಮ್, ಶ್ರೇಯಸ್ ಗೋಪಾಲ್, ಕೆ. ಗೌತಮ್, ಅಭಿಮನ್ಯು ಮಿಥುನ್, ಎಸ್. ಅರವಿಂದ್, ಪವನ್ ದೇಶಪಾಂಡೆ, ಜೆ. ಸುಚಿತ್, ಕೌನೇನ್ ಅಬ್ಬಾಸ್, ಶರತ್ ಶ್ರೀನಿವಾಸ್, ರೋನಿತ್ ಮೋರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.