ಆಫ್ಘಾನಿಸ್ತಾನ್ ಟೆಸ್ಟ್: ವರ್ಷದ ಬಳಿಕ ಕರುಣ್’ಗೆ ಸ್ಥಾನ

First Published May 8, 2018, 9:29 PM IST
Highlights

ಎಂ.ಎಸ್.ಕೆ ಪ್ರಸಾದ್ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿಯು ಆಫ್ಘಾನಿಸ್ತಾನ ವಿರುದ್ಧದ ಟೆಸ್ಟ್, ಐರ್ಲೆಂಡ್ ವಿರುದ್ಧದ 2 ಟಿ20, ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಗೆ ತಂಡವನ್ನು ಪ್ರಕಟಿಸಿದೆ.

ಮುಂಬೈ[ಮೇ.08]: ಬೆಂಗಳೂರಿನಲ್ಲಿ ಆಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಐತಿಹಾಸಿಕ ಏಕೈಕ ಟೆಸ್ಟ್ ಪಂದ್ಯಕ್ಕೆ ಕನ್ನಡಿಗ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೌಂಟಿ ಕ್ರಿಕೆಟ್’ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಅಜಿಂಕ್ಯ ರಹಾನೆ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದು, ಕೊಹ್ಲಿ ಬದಲಿಗೆ ಕರುಣ್ ನಾಯರ್’ಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಎಂ.ಎಸ್.ಕೆ ಪ್ರಸಾದ್ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿಯು ಆಫ್ಘಾನಿಸ್ತಾನ ವಿರುದ್ಧದ ಟೆಸ್ಟ್, ಐರ್ಲೆಂಡ್ ವಿರುದ್ಧದ 2 ಟಿ20, ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಗೆ ತಂಡವನ್ನು ಪ್ರಕಟಿಸಿದೆ. ಆಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಹೊರತು ಪಡಿಸಿ ಬಹುತೇಕ ಎಲ್ಲಾ ಆಟಗಾರರು ಪಾಲ್ಗೊಳ್ಳುತ್ತಿದ್ದು, ಇಂಗ್ಲೆಂಡ್’ನಲ್ಲಿ ಕೌಂಟಿ ಆಡುತ್ತಿರುವ ಚೇತೇಶ್ವರ ಪೂಜಾರ ಹಾಗೂ ಇಶಾಂತ್ ಶರ್ಮಾ ಬೆಂಗಳೂರಿಗೆ ಬಂದು ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. 2016ರಲ್ಲಿ ಇಂಗ್ಲೆಂಡ್ ವಿರುದ್ಧ ತ್ರಿಶತಕ ಸಿಡಿಸಿ ಗಮನ ಸೆಳೆದಿದ್ದ ಕರುಣ್ ಆ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರು ಇನಿಂಗ್ಸ್’ಗಳಲ್ಲಿ ಕೇವಲ 53 ರನ್ ಗಳಿಸಿ ನಿರಾಸೆ ಮೂಡಿಸಿದ್ದರು.

ಇನ್ನು ಇಂಗ್ಲೆಂಡ್ ಸರಣಿಗೂ ಮುನ್ನ ಐರ್ಲೆಂಡ್ ವಿರುದ್ಧ 2 ಟಿ20 ಪಂದ್ಯಗಳ ಸರಣಿಗೆ ಕೊಹ್ಲಿ ತಂಡ ಕೂಡಿಕೊಳ್ಳಲಿದ್ದಾರೆ. ಟಿ20 ತಂಡದಲ್ಲಿ ಸಿದ್ದಾರ್ಥ್ ಕೌಲ್, ವಾಷಿಂಗ್ಟನ್ ಸುಂದರ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸುರೇಶ್ ರೈನಾ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಆದರೆ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಮತ್ತೊಮ್ಮೆ ವಿಫಲವಾಗಿದ್ದಾರೆ. ಹಾಗೆಯೇ ಅಜಿಂಕ್ಯ ರಹಾನೆ ಸೀಮಿತ ಓವರ್’ಗಳ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.
ಐಪಿಎಲ್’ನಲ್ಲಿ ಸ್ಥಿರ ಪ್ರದರ್ಶನ ತೋರುತ್ತಿರುವ ಅಂಬಟಿ ರಾಯುಡು ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸೀಮಿತ ಓವರ್’ಗಳ ತಂಡದಲ್ಲಿ ಸ್ಥಾನ ಪಡೆಯಲು ಮತ್ತೊಮ್ಮೆ ವಿಫಲವಾಗಿದ್ದಾರೆ.
ಟೆಸ್ಟ್ ಪಂದ್ಯಕ್ಕೆ ಭಾರತ ತಂಡ: ಅಜಿಂಕ್ಯ ರಹಾನೆ (ನಾಯಕ), ಶಿಖರ್ ಧವನ್, ಮುರಳಿ ವಿಜಯ್, ವೃದ್ಧಿಮಾನ್ ಸಾಹ, ಕೆ.ಎಲ್.ರಾಹುಲ್, ಚೇತೇಶ್ವರ್ ಪೂಜಾರ, ಕರುಣ್ ನಾಯರ್, ಕುಲ್ದೀಪ್ ಯಾದವ್, ಉಮೇಶ್ ಯಾದವ್, ಮೊಹಮದ್ ಶಮಿ, ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಶಾರ್ದೂಲ್ ಠಾಕೂರ್.
ಟಿ20ಗೆ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಸುರೇಶ್ ರೈನಾ, ಮನೀಶ್ ಪಾಂಡೆ, ಎಂ.ಎಸ್.ಧೋನಿ, ದಿನೇಶ್ ಕಾರ್ತಿಕ್, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿದ್ಧಾರ್ಥ್ ಕೌಲ್, ಉಮೇಶ್ ಯಾದವ್.
ಏಕದಿನ ಸರಣಿಗೆ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್, ಅಂಬಟಿ ರಾಯುಡು, ಎಂ.ಎಸ್.ಧೋನಿ, ದಿನೇಶ್ ಕಾರ್ತಿಕ್, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್,ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿದ್ಧಾರ್ಥ್ ಕೌಲ್.

click me!