
ಸಿಯೋಲ್(ಡಿ.10): ಕೊರಿಯನ್ ಗ್ರ್ಯಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪರುಪಳ್ಳಿ ಕಶ್ಯಪ್ ಅವರ ಜಯದ ನಾಗಾಲೋಟ ಅಂತ್ಯಗೊಂಡಿದೆ.
ಇಂದು ನಡೆದ ಪುರುಷರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಅವರು, ಸ್ಥಳೀಯ ಪ್ರತಿಭೆ ಸೊನ್ ವಾನ್ ಹೊ ಅವರ ವಿರುದ್ಧ 23-21, 21-16 ಗೇಮ್'ಗಳ ಅಂತರದಲ್ಲಿ ಸೋಲು ಕಂಡರು.
ಮೊಣಕಾಲು ಗಾಯದಿಂದಾಗಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶದಿಂದ ವಂಚಿತರಾಗಿದ್ದ ಕಾಮನ್ವೆಲ್ತ್ ಕ್ರೀಡಾಕೂಟದ ಚಾಂಪಿಯನ್ ಕಶ್ಯಪ್, ಈ ಟೂರ್ನಿಯ ಮೂಲಕ ತಮ್ಮ ವೃತ್ತಿಜೀವನಕ್ಕೆ ವಾಪಸಾಗಿದ್ದರು. ಟೂರ್ನಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿದ್ದ ಅವರು, ಉಪಾಂತ್ಯದವರೆಗೆ ಪಯಣಿಸುವ ಮೂಲಕ ತಮ್ಮ ಫಾರ್ಮ್ ಸಾಬೀತುಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.