
ಬೆಂಗಳೂರು(ಸೆ.08): ಕರ್ನಾಟಕ ಚಲನ ಚಿತ್ರ ಕಪ್ ಟಿ10 ಕ್ರಿಕೆಟ್ ಟೂರ್ನಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. ಮೊದಲ ಪಂದ್ಯದಲ್ಲೇ ಗೋಲ್ಡನ್ ಸ್ಟಾರ್ ಗಣೇಶ್ ನೇತೃತ್ವದ ಒಡೆಯರ್ ಚಾರ್ಜರ್ಸ್ ಕೊನೆ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿತು.
ಕಿಚ್ಚ ಸುದೀಪ್ ನೇತೃತ್ವದ ಕದಂಬ ಲಯನ್ಸ್ ನೀಡಿದ್ದ 122 ರನ್‌ಗಳ ಗುರಿಯನ್ನ ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸೋ ಮೂಲಕ ಗೆಲುವಿನ ಕೇಕೆ ಹಾಕಿತು. ಈ ಮೂಲಕ ಮೊದಲ ಗಣೇಶ್ ತಂಡ ಶುಭಾರಂಭ ಮಾಡಿತು.
ಇದಕ್ಕೂ ಮೊದಲು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೇವಲ 17 ಎಸೆತಗಳಲ್ಲಿ 29 ರನ್ ಸಿಡಿಸೋ ಮೂಲಕ ನೆರೆದಿದ್ದ ಅಭಿಮಾನಿಗಳಿಗೆ ಮನರಂಜನೆ ನೀಡಿದರು.
ಟೂರ್ನಿ ಉದ್ಘಾಟನೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಎರಡು ತಂಡಗಳ ಆಟಗಾರರಿಗೆ ಶುಭಕೋರಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.